LIVE: ಮೈಸೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ - PM Modi Rally in Mysuru - PM MODI RALLY IN MYSURU
🎬 Watch Now: Feature Video
Published : Apr 14, 2024, 5:19 PM IST
|Updated : Apr 14, 2024, 6:12 PM IST
ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ವಿಜಯಸಂಕಲ್ಪ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಉಪಸ್ಥಿತರಿದ್ದಾರೆ.ಬೃಹತ್ ಸಮಾವೇಶದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಭಾಗಗಳಿಂದ ಬಿಜೆಪಿ - ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದಾರೆ. ಈ ವೇಳೆ ನಾಲ್ಕು ಕ್ಷೇತ್ರಗಳ ಮೈತ್ರಿ ಅಭ್ಯರ್ಥಿಗಳು ಕೂಡ ಕಾರ್ಯಕ್ರಮದಲ್ಲಿ ಇದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿ ಸಮಾವೇಶ ಇದಾಗಿದ್ದು, ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು ಮಾತನಾಡುತ್ತಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿನ ಸಮಾವೇಶದ ವೇದಿಕೆ ಮುಂಭಾಗ 60 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರು ರಸ್ತೆ ಮೂಲಕ ಮಹಾರಾಜ ಕಾಲೇಜು ಮೈದಾನಕ್ಕೆ ತಲುಪಿದರು. ಸಮಾವೇಶದ ಬಳಿಕ ಮೈಸೂರು ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ಮಂಗಳೂರಿಗೆ ತೆರಳಲಿದ್ದಾರೆ.
Last Updated : Apr 14, 2024, 6:12 PM IST