ಚಂದ್ರಶೇಖರನ್ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ನೀಡಬೇಕು: ಪ್ರಣವಾನಂದ ಸ್ವಾಮೀಜಿ ಆಗ್ರಹ - Pranavananda Swamiji - PRANAVANANDA SWAMIJI
🎬 Watch Now: Feature Video
Published : Jun 1, 2024, 4:04 PM IST
ಶಿವಮೊಗ್ಗ: ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 1 ಕೋಟಿ ರೂ ಪರಿಹಾರ ನೀಡಬೇಕೆಂದು ಕರದಾಳದ ಬ್ರಹ್ಮಶ್ರೀ ನಾರಾಯಣ ಗುರು ಪೀಠದ ಪ್ರಣವಾನಂದ ಸ್ವಾಮೀಜಿ ಶಿವಮೊಗ್ಗದಲ್ಲಿ ಆಗ್ರಹಿಸಿದ್ದಾರೆ. ಮೃತ ಚಂದ್ರಶೇಖರನ್ ಅವರ ಮನೆಗೆ ಭೇಟಿ ನೀಡಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ನಂತರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ನಂತರ ಮಾತನಾಡಿದ ಅವರು, "ನಿಮ್ಮ ಗಂಡನ ಸಾವಿಗೆ ನ್ಯಾಯ ಸಿಗಬೇಕು. ನಿಮ್ಮ ಜೊತೆ ನಾವು ಇರುತ್ತೇವೆ. ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಬೇಕಾದ ಸಹಾಯವನ್ನು ಮಾಡುವಂತೆ ಹಾಗೂ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ನಾವು ಆಗ್ರಹ ಮಾಡುತ್ತೇವೆ. ನಾವು ಹಿಂದುಳಿದ ಮಠಾಧಿಪತಿಗಳು ಸೇರಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿ ಮಾಡುತ್ತೇವೆ" ಎಂದು ಭರವಸೆ ನೀಡಿದರು. "ಸರ್ಕಾರ ಇವರ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ನೋಡಿಕೊಂಡು ಸರ್ಕಾರ ಸೂಕ್ತ ಪರಿಹಾರವನ್ನು ನೀಡಬೇಕು." ಎಂದು ಇದೇ ವೇಳೆ ಒತ್ತಾಯಿಸಿದರು.
ಇದನ್ನೂ ಓದಿ: ನನ್ನ ಗಂಡನ ಸಾವಿಗೆ ನ್ಯಾಯ ಸಿಗಬೇಕು: ಮೃತ ಚಂದ್ರಶೇಖರನ್ ಪತ್ನಿ ಆಗ್ರಹ - CHANDRASHEKARAN SUICIDE CASE