ನಾಯಿಗಳ ದಾಳಿಗೊಳಗಾದ ಜಿಂಕೆಯನ್ನು ರಕ್ಷಿಸಿ ಮರಳಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ ಸಿಬ್ಬಂದಿ - Dog attack on deer - DOG ATTACK ON DEER
🎬 Watch Now: Feature Video
Published : May 21, 2024, 1:17 PM IST
ಚಾಮರಾಜನಗರ: ದಾರಿ ತಪ್ಪಿ ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಗ್ರಾಮಸ್ಥರು ಬೀದಿ ನಾಯಿಗಳಿಂದ ಜಿಂಕೆಯನ್ನು ರಕ್ಷಿಸಿ, ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಗ್ರಾಮದಲ್ಲಿ ನಡೆದಿದೆ.
ಬಂಡೀಪುರ ಅಭಯಾರಣ್ಯದ ವ್ಯಾಪ್ತಿಯಲ್ಲಿರುವ ಮದ್ದೂರು ಗ್ರಾಮಕ್ಕೆ ಆಹಾರ ಅರಸಿ ದಾರಿತಪ್ಪಿ ಬಂದಿದ್ದ ಜಿಂಕೆಯನ್ನು ಬೀದಿ ನಾಯಿಗಳು ಸುತ್ತುವರಿದು ಕಚ್ಚಿ ಗಾಯಗೊಳಿಸಿದ್ದವು. ಇದನ್ನು ನೋಡಿದ ಸಾರ್ವಜನಿಕರು ನಾಯಿಗಳನ್ನು ಚದುರಿಸಿ ಜಿಂಕೆಯನ್ನು ರಕ್ಷಣೆ ಮಾಡಿದರು. ನಂತರ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಜೀಪಿನಲ್ಲಿ ಕೊಂಡೊಯ್ದು ಗಾಯಕ್ಕೆ ಚಿಕಿತ್ಸೆ ನೀಡಿ ನಂತರ ಅರಣ್ಯಕ್ಕೆ ಬಿಟ್ಟಿದ್ದಾರೆ.
ನಿರಂತರ ಮಳೆಗೆ ಮನೆ ಗೋಡೆ ಕುಸಿತ: ಗುಂಡ್ಲುಪೇಟೆ ತಾಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಸುರಿದ ಜಡಿ ಮಳೆಗೆ ಮನೆ ಗೋಡೆ ಕುಸಿದು ಹೋಗಿರುವ ಘಟನೆ ನಡೆದಿದೆ. ಮಂಚಹಳ್ಳಿ ಗ್ರಾಮದ ಚಿಕ್ಕಣ್ಣಶೆಟ್ಟಿ ಹುಚ್ಚಶೆಟ್ಟಿ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮನೆ ಗೋಡೆ ಕುಸಿತದಿಂದ ಮಾಲೀಕರಿಗೆ ತೀವ್ರ ನಷ್ಟ ಉಂಟಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಮಾಲೀಕ ಚಿಕ್ಕಣ್ಣಶೆಟ್ಟಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ದಾವಣಗೆರೆಯಲ್ಲಿ ಭಾರೀ ಮಳೆಗೆ ಭತ್ತದ ಬೆಳೆ ನಾಶ: ಪರಿಹಾರಕ್ಕಾಗಿ ರೈತರ ಆಗ್ರಹ - Paddy crop damaged