ಕೋಲಾರದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ: ರಾಹುಲ್ ಗಾಂಧಿ ಭಾಗಿ - RAHUL GANDHI - RAHUL GANDHI
🎬 Watch Now: Feature Video
Published : Apr 17, 2024, 4:38 PM IST
|Updated : Apr 17, 2024, 6:00 PM IST
ಕೋಲಾರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪರ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ 12.30ಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ಏರ್ಪೋಟ್ಗೆ ಬಂದಿಳಿದ ಅವರು ರೋಡ್‌ಶೋ ಮೂಲಕ ಮಂಡ್ಯ ವಿಶ್ವವಿದ್ಯಾಲಯ ಗ್ರೌಂಡ್‌ಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಮತಯಾಚಿಸಿದರು. ಇದೀಗ ಮಂಡ್ಯದಿಂದ ನೇರವಾಗಿ ಕೋಲಾರಕ್ಕೆ ಭೇಟಿ ನೀಡಿದ್ದು, ಚೊಕ್ಕಂಡಹಳ್ಳಿ ಗೇಟ್ನಲ್ಲಿ ನಡೆಯುತ್ತಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಸಭೆಯಲ್ಲಿ ಭಾಗಿಯಾಗಿದ್ದಾರೆ. ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಕೇರಳದ ವಯನಾಡ್ನಿಂದ ಲೋಕಸಭೆ ಚುನಾವಣೆಗೆ ಎರಡನೇ ಬಾರಿಗೆ ಸ್ಪರ್ಧೆ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು. ಕ್ಷೇತ್ರದ ಹಲವೆಡೆ ರೋಡ್ ಶೋ ನಡೆಸಿದ ಕೈ ನಾಯಕ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಭಾರತದ ಸಂವಿಧಾನವನ್ನು ನಾಶಪಡಿಸಲು ಮತ್ತು ಬದಲಾಯಿಸಲು ಆರ್‌ಎಸ್‌ಎಸ್ ಮತ್ತು ಬಿಜೆಪಿ ಪ್ರಯತ್ನಿಸುತ್ತಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.
Last Updated : Apr 17, 2024, 6:00 PM IST