ಕೃಷ್ಣಾ ನದಿಗೆ ಲಕ್ಷಾಂತರ ಕ್ಯೂಸೆಕ್ ನೀರು ಬಿಡುಗಡೆ: ರಾಯಚೂರಿನ ಶೀಲಹಳ್ಳಿ ಸೇತುವೆ ಮುಳುಗಡೆ - Raichur Sheelahalli Bridge
🎬 Watch Now: Feature Video
ರಾಯಚೂರು: ಕೃಷ್ಣಾ ನದಿಗೆ ಲಕ್ಷಾಂತರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ ಪರಿಣಾಮ ರಾಯಚೂರು ಜಿಲ್ಲೆಯ ನಡುಗಡ್ಡೆ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕು ವ್ಯಾಪ್ತಿಯಲ್ಲಿ ಬರುವ ಶೀಲಹಳ್ಳಿ ಸೇತುವೆ ಸಂಪೂರ್ಣವಾಗಿ ಜಲಾವೃತಗೊಂಡಿದ್ದು ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹೀಗಾಗಿ ಜಲಾಶಯದ ಹೆಚ್ಚುವರಿ ನೀರನ್ನು ಕ್ರಸ್ಟ್‌ಗೇಟ್ ಮೂಲಕ ನದಿಗೆ ಬಿಡಲಾಗುತ್ತಿದೆ. ಬುಧವಾರ ಮಧ್ಯಾಹ್ನ 2:30ಕ್ಕೆ 2 ಲಕ್ಷ ಕ್ಯೂಸೆಕ್ ನೀರು ಒಳಹರಿವು ದಾಖಲಾಗಿತ್ತು. ಜಲಾಶಯದಿಂದ 2 ಲಕ್ಷ 2 ಸಾವಿರದ 625 ಕ್ಯೂಸೆಕ್ ನೀರನ್ನು 25 ಕ್ರಸ್ಟ್‌ಗೇಟ್ ಮೂಲಕ ಕೃಷ್ಣಾ ನದಿಗೆ ಬಿಡಲಾಗಿದೆ.
ಇದರ ಪರಿಣಾಮ ಕಡ್ಡದಗಡ್ಡಿ, ಶೀಲಹಳ್ಳಿ ಸೇರಿದಂತೆ ವಿವಿಧ ನಡುಗಡ್ಡೆ ಪ್ರದೇಶಕ್ಕೆ ತೆರಳುವ ಸಂಪರ್ಕ ಕಡಿತವಾಗಿದ್ದು, ಪರ್ಯಾಯ ರಸ್ತೆ ಮಾರ್ಗದಿಂದ ಓಡಾಡಬೇಕಾಗಿದೆ. ದಿನದಿಂದ ದಿನಕ್ಕೆ ಕೃಷ್ಣಾ ನದಿಗೆ ಒಳಹರಿವು ಹೆಚ್ಚಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Watch...ಭದ್ರಾ ನದಿ ಮಧ್ಯದಲ್ಲಿ ಸಿಲುಕಿದ್ದ 30ಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ - Cattle Rescue