ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಪ್ರವಾಹದ ರೀತಿ ಹರಿದ ಮಳೆ ನೀರು: ವಿಡಿಯೋ - Charmadi Ghat
🎬 Watch Now: Feature Video
Published : Aug 21, 2024, 7:57 PM IST
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಂದು ಭಾರೀ ಮಳೆ ಸುರಿಯುತ್ತಿದೆ. ಚಾರ್ಮಾಡಿ ಘಾಟ್ ರಸ್ತೆಯಲ್ಲಿ 2 ಅಡಿ ಎತ್ತರ ನೀರು ಹರಿಯಿತು. ಮೂಡಿಗೆರೆ ತಾಲೂಕಿನ ಬಾಳೂರು, ಕಳಸ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಗುಡ್ಡದ ಕೆಸರುಮಿಶ್ರಿತ ನೀರಿನಿಂದ ರಸ್ತೆಯೇ ಕಾಣದಂತಾಗಿದೆ. ನೀರಿನ ರಭಸದ ಮಧ್ಯೆ ಸಂಚರಿಸಲಾಗದೆ ಕೆಲ ವಾಹನಗಳು ಕೊಟ್ಟಿಗೆಹಾರದಲ್ಲೇ ನಿಂತಿವೆ.
ಬಿಟ್ಟೂ ಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಈ ಭಾಗದ ಜನರು ಮನೆಯಿಂದ ಹೊರಬರಲು ಸಾಧ್ಯವಾಗದೇ ಮನೆಯಲ್ಲೇ ಕುಳಿತುಕೊಳ್ಳುವಂತಾಗಿದೆ. ಅದರಲ್ಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರವಾಹದ ರೀತಿಯಲ್ಲಿ ನೀರು ಹರಿಯುತ್ತಿದ್ದು, ವಾಹನ ಸಂಚಾರದಲ್ಲೂ ಕೂಡ ಅಡಚಣೆ ಉಂಟಾಗುತ್ತಿದೆ.
ಇನ್ನು ರಾಜ್ಯದಲ್ಲಿ ಮಳೆ ಮತ್ತೆ ವೇಗ ಪಡೆದಿದೆ. ಮುಂದಿನ 24 ಗಂಟೆಗಳಿಗೆ ಅನ್ವಯಿಸುವಂತೆ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಕೋಲಾರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರದ ಮುನ್ಸೂಚನೆ: 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ - Karnataka Rain Alert