ದಸರಾ ರಜೆ: ಮಾದಪ್ಪನ ಹುಂಡಿಗೆ 28 ದಿನದಲ್ಲಿ ಹರಿದು ಬಂತು 2 ಕೋಟಿ ರೂ.ಕಾಣಿಕೆ
🎬 Watch Now: Feature Video
Published : Oct 25, 2024, 1:48 PM IST
ಚಾಮರಾಜನಗರ: ಹನೂರು ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.80 ಕೋಟಿ ರೂ. ಸಂಗ್ರಹವಾಗಿದೆ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಿ ಸಂಜೆ 7:00 ಗಂಟೆಗೆ ಮುಕ್ತಾಯಗೊಂಡಿತು.
ಮಹಾನವಮಿ, ಆಯುಧ ಪೂಜೆ ವಿಜಯದಶಮಿ, ದಸರಾ ರಜಾ ದಿನಗಳು, ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಆದ್ದರಿಂದ ಹರಕೆಯ ರೂಪದಲ್ಲಿ 2,00,80,844 ನಗದು 30 ಗ್ರಾಂ ಚಿನ್ನ ಹಾಗೂ 1,865 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಇದಲ್ಲದೆ ಇ ಹುಂಡಿಯಿಂದ 2,74,204 ಒಮಾನ್ನ 10 ನೋಟು, ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 22 ನೋಟುಗಳನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಹುಂಡಿ ಹಣ ಏಣಿಕೆ ವಿವರವನ್ನು ನೀಡಿದ್ದಾರೆ.
ಇದನ್ನೂ ಓದಿ: ಗಾಳಿ ಆಂಜನೇಯ ದೇವಸ್ಥಾನದ ಹುಂಡಿ ಹಣ ಕಳವು; ಅರ್ಚಕ, ಟ್ರಸ್ಟಿಗಳ ವಿರುದ್ಧ ಎಫ್‌ಐಆರ್ - Gali Anjaneya Temple