ಶಬರಿಮಲೆ ದೇವಾಲಯದಲ್ಲಿ ಸಂಕ್ರಾಂತಿ ಸಂಭ್ರಮ: ಮಕರ ಜ್ಯೋತಿ ದರ್ಶನದ ನೇರ ಪ್ರಸಾರ - SANKRANTI CELEBRATIONS

🎬 Watch Now: Feature Video

thumbnail

By ETV Bharat Karnataka Team

Published : Jan 14, 2025, 6:22 PM IST

ತಿರುವಂತನಪುರಂ: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದು ಮಕರ ಜ್ಯೋತಿ ದರ್ಶನವಾಗಲಿದೆ. ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಧಾವಿಸಿದ್ದಾರೆ. ಅದರ ನೇರ ಪ್ರಸಾರ ಇಲ್ಲಿದೆ.ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಕೇರಳದ ಶಬರಿಮಲೆಯಲ್ಲಿ ಇಂದು ಸಂಜೆ ನಡೆಯಲಿರುವ ಮಕರವಿಳಕ್ಕು ದರ್ಶನಕ್ಕಾಗಿ ಅಥವಾ ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮಿಸಿದ್ದಾರೆ. ದೇವಸ್ಥಾನದಲ್ಲಿ ಭದ್ರತೆಗೆ ಬಿಗಿ ಬಂದೋಬಸ್ತ್‌ ಮಾಡಲಾಗಿದ್ದು, ಮಕರ ವಿಳಕ್ಕು ಉತ್ಸವದ ಭದ್ರತೆ ಮತ್ತು ಸುಗಮ ನಿರ್ವಹಣೆಗಾಗಿ ಭಾರೀ ಪ್ರಮಾಣದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇನ್ನು 41 ದಿನದಲ್ಲಿ 32 ಲಕ್ಷ ಭಕ್ತರು ಭೇಟಿ ನೀಡಿದ್ದು, ಶಬರಿಮಲೆ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ತಿಳಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ 82 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಬಂದಿದೆ. ಮುಖ್ಯವಾಗಿ ಭಕ್ತರ ಅರ್ಪಣೆಗಳು ಮತ್ತು ದೇವಾಲಯದಲ್ಲಿ ಉತ್ಪಾದಿಸಿದ ವಸ್ತುಗಳಾದ ಅರವಣ ಪಾಯಸ ಹಾಗೂ ಅಪ್ಪಂನ ಮಾರಾಟದಿಂದ ಆದಾಯ ಬರುತ್ತಿದೆ ಎಂದು ಅವರು ಹೇಳಿದ್ದಾರೆ. 

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.