ಚಾಮರಾಜನಗರ: ಕೆಂಡವನ್ನೇ ದೇವರಿಗೆ ನೈವೇದ್ಯವಾಗಿ ಅರ್ಪಿಸಿ ವಿಶೇಷ ಆಚರಣೆ - Special celebration - SPECIAL CELEBRATION

🎬 Watch Now: Feature Video

thumbnail

By ETV Bharat Karnataka Team

Published : Mar 26, 2024, 12:18 PM IST

ಚಾಮರಾಜನಗರ: ಜಾನಪದ ನಾಡು ಚಾಮರಾಜನಗರವು ವೈವಿಧ್ಯಮಯ ಜಾತ್ರೆ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳಿಂದಲೇ ಗಮನ ಸೆಳೆಯುವ ಪ್ರದೇಶ ಎಂಬುದರಲ್ಲಿ ಎರಡು ಮಾತಿಲ್ಲ. ಅದರಂತೆಯೇ ನಿಗಿ ನಿಗಿ ಕೆಂಡವನ್ನೇ ದೇವರಿಗೆ ನೈವೇದ್ಯವಾಗಿ ಅರ್ಪಿಸಿರುವ ಸಂಪ್ರದಾಯ ಚಾಮರಾಜನಗರ ತಾಲೂಕಿನ‌ ಬಾಣಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಾಣಹಳ್ಳಿ ಗ್ರಾಮದಲ್ಲಿ ಸತ್ಯವತಿ ದೇವರ ದೇವಸ್ಥಾನದಲ್ಲಿ ವರ್ಷಕ್ಕೊಮ್ಮೆ ಜಾತ್ರೆ ನಡೆಯುತ್ತದೆ. ಸಾಮಾನ್ಯವಾಗಿ ಅಗ್ನಿ ಹಾಯುವುದು ಎಲ್ಲೆಡೆ ಸಾಮಾನ್ಯ. ‌ಆದರೆ ಇಲ್ಲಿ ಕೆಂಡವನ್ನು ಬರಿಗೈಯಲ್ಲಿ ಕೊಳಗಕ್ಕೆ ತುಂಬಿ ನಂತರ ಬಿಳಿ ಬಟ್ಟೆಗೆ ಕೆಂಡ ಸುರಿದು ದೇವರಿಗೆ ನೈವೇದ್ಯ ಇಡುವುದು ಇಲ್ಲಿನ‌ ವಿಶೇಷವಾಗಿದೆ.

ರೋಮಾಂಚಕಕಾರಿಯಾದ ಈ ದೃಶ್ಯವನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡು ಅತೀಂದ್ರಿಯ ಶಕ್ತಿಗೆ ತಲೆ ಬಾಗಿದ್ದಾರೆ. ಬರಿಗೈಯಲ್ಲಿ ಕೆಂಡ ಸುರಿದರೂ ಅರ್ಚಕನ ಕೈ ಸುಡುವುದಿಲ್ಲವಂತೆ, ಬಟ್ಟೆಯ ಜೋಳಿಗೆಗೆ ಏನೂ ಆಗುವುದಿಲ್ಲ. ಈ‌ ಜಾತ್ರೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಎಲ್ಲರನ್ನೂ ಅಚ್ಚರಿಗೆ ನೂಕುವ ಈ ಆಚರಣೆ ಸತ್ಯವತಿ ದೇವರ ಪವಾಡ ಎಂಬುದು ಈ ಭಾಗದ ಭಕ್ತರ ನಂಬಿಕೆಯಾಗಿದೆ.

ಇದನ್ನೂ ಓದಿ: ಮೋದಿಗಾಗಿ ದೇವಸ್ಥಾನಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿರುವ ಶತಾಯುಷಿ ಶಿವಮ್ಮ - Centenarian Prayer For Modi

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.