ಸಚಿವ ರಾಜಣ್ಣ ಕುಟುಂಬದಿಂದ ತುಮಕೂರಿನ ರಾಮಮಂದಿರದಲ್ಲಿ ವಿಶೇಷ ಪೂಜೆ - Ayodhye Rama Mandira

🎬 Watch Now: Feature Video

thumbnail

By ETV Bharat Karnataka Team

Published : Jan 22, 2024, 1:29 PM IST

ತುಮಕೂರು: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ಲಕ್ಷಾಂತರ ಮಂದಿ ಅಯೋಧ್ಯೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಇನ್ನೂ ಕೆಲವರು ತಮ್ಮ ತಮ್ಮ ಊರಿನಲ್ಲೇ ಇರುವ ರಾಮ ಮಂದಿರಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಇದೇ ರೀತಿ ಸಚಿವ ಕೆ. ಎನ್​. ರಾಜಣ್ಣ ಅವರ ಕುಟುಂಬಸ್ಥರು ಮಧುಗಿರಿ ತಾಲೂಕಿನ ಕಿತ್ತಗಳ್ಳಿ ಗ್ರಾಮದಲ್ಲಿರುವ ರಾಮ ಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿದರು.

ಕಿತ್ತಗಳ್ಳಿ ಗ್ರಾಮದಲ್ಲಿ ಇರುವ ರಾಮ ದೇವಸ್ಥಾನದಲ್ಲಿ ಇಂದು ಬೆಳಗ್ಗೆಯಿಂದಲೇ ಹೋಮ-ಹವನ ನಡೆಸಿ ಪೂಜೆ ಸಲ್ಲಿಸುತ್ತಿರುವ ಸಚಿವರ ಕುಟುಂಬದವರು ವಿಧಿ ವಿಧಾನದಂತೆ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಪೂಜಾ ಕಾರ್ಯಕ್ರಮದಲ್ಲಿ ಸಚಿವ ಕೆ.ಎನ್ ರಾಜಣ್ಣ ಅವರ ಪತ್ನಿ ಶಾಂತಲ ಹಾಗೂ ಸಂಬಂಧಿಕರು ಪಾಲ್ಗೊಂಡರು.

ಪಾಳು ಬಿದ್ದಿದ್ದ ಈ ದೇವಸ್ಥಾನವನ್ನು 2006ರಲ್ಲಿ ಕೆ.ಎನ್​. ರಾಜಣ್ಣ ಜೀರ್ಣೋದ್ಧಾರ ಮಾಡಿದ್ದರು. ಅಂದಾಜು 20 ಲಕ್ಷ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಿದ್ದ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜಾ ಕಾರ್ಯಕ್ರಮಗಳು ಮುಂಜಾನೆಯಿಂದಲೇ ನೆರವೇರುತ್ತಿವೆ. ಅಯೋಧ್ಯೆಯ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಯಕ್ಕೆ ಸರಿಯಾಗಿ ಇಲ್ಲೂ ಪೂಜೆ ಸಲ್ಲಿಸಲಾಯಿತು.

ಇದನ್ನೂ ನೋಡಿ: ಧಾರವಾಡ: ಮರಳಿನಲ್ಲಿ ಅರಳಿದ ರಾಮಮಂದಿರ, ಕಲಾವಿದನ ಕೈಚಳಕ ನೋಡಿ

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.