ಬಿಳಿಗಿರಿರಂಗನ ಬೆಟ್ಟದಿಂದ ಬರುವಾಗ ಬಸ್ ಪಲ್ಟಿ; 16ಕ್ಕೂ ಅಧಿಕ ಮಂದಿಗೆ ಗಾಯ - Bus Overturned - BUS OVERTURNED
🎬 Watch Now: Feature Video
Published : Jun 1, 2024, 5:20 PM IST
ಚಾಮರಾಜನಗರ: ಪೂಜೆ ಮುಗಿಸಿ ಹಿಂತಿರುಗುವಾಗ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಪ್ರಸಿದ್ಧ ಯಾತ್ರಾ ಸ್ಥಳವಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ರಸ್ತೆಯಲ್ಲಿ ನಡೆದಿದೆ. ಶನಿವಾರ ಇರುವ ಹಿನ್ನೆಲೆ ಖಾಸಗಿ ಬಸ್ ಮಾಡಿಕೊಂಡು ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಕುಟುಂಬವೊಂದು ಬಿಳಿಗಿರಿರಂಗನಬೆಟ್ಟಕ್ಕೆ ಬಂದಿತ್ತು.
ಪೂಜೆ ಮುಗಿಸಿಕೊಂಡು ಹಿಂತಿರುಗುವಾಗ ಗವಿಬೋರೆ ಹತ್ತಿರ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಇಳಿದಿದೆ. ಘಟನೆಯಲ್ಲಿ 16ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು ಎಲ್ಲರನ್ನೂ ಯಳಂದೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಸ್ ಪಲ್ಟಿಯಾಗುತ್ತಿದ್ದಂತೆ ಖಾಸಗಿ ಬಸ್ ಚಾಲಕ ಪರಾರಿಯಾಗಿದ್ದಾನೆ. ಯಳಂದೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹಳ್ಳಕ್ಕೆ ಇಳಿದ ಕಾರು: ಮತ್ತೊಂದೆಡೆ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಇಳಿದ ಘಟನೆ ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ ಗೇಟ್ನಲ್ಲಿ ನಡೆದಿದ್ದು, ದಂಪತಿ ಸೇರಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದೆ. ಬೆಂಗಳೂರು ಮೂಲದ ಪೀಯುಶ್ ಸಿಂಘಲ್, ಪತ್ನಿ ರಾಧಿಕಾ ಹಾಗೂ ಮಕ್ಕಳಾದ ಅದಿಲ್ ಮತ್ತು ಮಾನ್ಯ ಎಂಬವರಿಗೆ ಗಾಯಗಳಾಗಿದೆ. ಊಟಿ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುವ ವೇಳೆ ರಸ್ತೆ ಬದಿಯ 10 ಅಡಿ ಆಳದ ಹಳ್ಳಕ್ಕೆ ಇಳಿದಿ ಪರಿಣಾಮ ನಾಲ್ವರಿಗೂ ಗಂಭೀರ ಪೆಟ್ಟುಗಳಾಗಿದೆ.
ಅಪಘಾತ ಮಾಹಿತಿ ತಿಳಿಯುತ್ತಿದ್ದಂತೆ ಹೈವೆ ಗಸ್ತು ಸಿಬ್ಬಂದಿ ನಾಗೇಂದ್ರ ಹಾಗೂ ಖಾಸಗಿ ಆಂಬುಲೆನ್ಸ್ ಚಾಲಕ ರಾಜೀವ್ ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರಥಮ ಚಿಕಿತ್ಸೆ ಕೊಟ್ಟು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ ಮಾಡಿದ್ದಾರೆ. ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಹುಲಿಗೆಮ್ಮ ಜಾತ್ರೆಗೆ ಹೊರಟವರ ಮೇಲೆ ಹರಿದ ಲಾರಿ, ಓರ್ವ ಸಾವು - Koppal Accident