ಶಿವಮೊಗ್ಗ: ಮ್ಯೂಸಿಕಲ್‌ ಚೇರ್‌ ಆಡಿಸಿ ಮತದಾನದ ಜಾಗೃತಿ ಮೂಡಿಸಿದ ಸ್ವೀಪ್ ಸಮಿತಿ - voting awareness in shivamogga - VOTING AWARENESS IN SHIVAMOGGA

🎬 Watch Now: Feature Video

thumbnail

By ETV Bharat Karnataka Team

Published : Mar 29, 2024, 10:54 PM IST

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರಲ್ಲಿ ಅರಿವು ಮೂಡಿಸಲು ಶಿವಮೊಗ್ಗ ಮಹಾನಗರ ಪಾಲಿಕೆಯ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ವತಿಯಿಂದ ವಿಭಿನ್ನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಕಡೆ ಮ್ಯೂಸಿಕಲ್‌ ಚೇರ್‌ ಆಡಿಸಿ, ಜನರಲ್ಲಿ ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.

ಶಿವಮೊಗ್ಗ ಆರ್​ಎಂಎಲ್ ನಗರದಲ್ಲಿ ಕಳೆದ ಬಾರಿ ಕಡಿಮೆ ಮತದಾನ ನಡೆದಿತ್ತು. ಹೀಗಾಗಿ ಮಹಾನಗರ ಪಾಲಿಕೆಯ ಸ್ವೀಪ್ ಸಮಿತಿ ವತಿಯಿಂದ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಮ್ಯೂಸಿಕಲ್‌ ಚೇರ್‌ ಆಡಿಸಿ ಮತದಾನ ಜಾಗೃತಿ ಮೂಡಿಸಲಾಯಿತು. ಮತದಾನದ ದಿನ ಇದೇ ಉತ್ಸಾಹದಲ್ಲಿ ತಪ್ಪದೆ ಮಾತದಾನ ಮಾಡಬೇಕು ಎಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ವೇಳೆ ಸ್ವೀಪ್ ನೊಡಲ್ ಅಧಿಕಾರಿಗಳಾದ ಅನುಪಮಾ ಟಿ.ಆರ್​. ಸುಪ್ರಿಯಾ. ರತ್ನಾಕರ್ ಸೇರಿದಂತೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿ, ಬಿಎಲ್​ಓಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವರೇ ಯುವ ಮತದಾರರು? - Young Voters

ಮತದಾನ ಜಾಗೃತಿಗೆ ವಿಶೇಷ ಚೇತನರ ಬೈಕ್​ ಜಾಥಾ(ಬೆಂಗಳೂರು): ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಚೇತನರ ದ್ವಿಚಕ್ರ/ ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಬುಧವಾರ ಚಾಲನೆ ಕೊಟ್ಟಿದ್ದರು. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶೇಷ ಚೇತನರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಗಿತ್ತು.

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.