ಕಲ್ಲೇಶ್ವರ ಸ್ವಾಮಿ ದೇಗುಲದ ರಥಕ್ಕೆ ಬೆಂಕಿ: ಕಿಡಿಗೇಡಿಯನ್ನು ಥಳಿಸಿದ ಗ್ರಾಮಸ್ಥರು - Kalleshwar Swamy Temple
🎬 Watch Now: Feature Video
Published : Mar 12, 2024, 11:08 AM IST
ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನ ಪುರ ಗ್ರಾಮದಲ್ಲಿ ನೂರಾರು ವರ್ಷದ ಪ್ರಾಚೀನ ಚೋಳರ ಕಾಲದ ಶ್ರೀಕಲ್ಲೇಶ್ವರ ಸ್ವಾಮಿ ದೇವಾಲಯದ ರಥ ಹೊತ್ತಿ ಉರಿದಿರುವ ಘಟನೆ ಸೋಮವಾರ ನಡೆದಿದೆ. ಬೆಂಕಿ ಹಚ್ಚಿರುವ ಬಗ್ಗೆ ಉತ್ತರ ಭಾರತ ಮೂಲದ ವ್ಯಕ್ತಿಯ ಮೇಲೆ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆಯ ಸಿ ಗ್ರೇಡ್ ದೇವಾಲಯ ಇದಾಗಿದೆ. ಪ್ರತಿ ವರ್ಷ ಜಾತ್ರೆಯು ಮಾರ್ಚ್ 20 ರಂದು ನಡೆಯಲಿದೆ. ಜಾತ್ರೆ ಮಹೋತ್ಸವಕ್ಕೆ ಸರ್ವ ತಯಾರಿ ನಡೆಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಉತ್ತರ ಭಾರತದ ಮೂಲದ ಆರೋಪಿಯೇ ಕೃತ್ಯ ಎಸಗಿದ್ದಾನೆ ಎಂದು ಗ್ರಾಮಸ್ಥರು ಶಂಕಿಸಿ, ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಆತನನ್ನು ಪೊಲೀಸರು ವಶಕ್ಕೆ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಥ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಘಟನೆಗೆ ಕಾರಣ ತಿಳಿದುಬಂದಿದೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ರಥೋತ್ಸವ: ವೈಭವ ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು