ಮಾಧುಸ್ವಾಮಿ ಅನುಪಸ್ಥಿತಿಯಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ಭರ್ಜರಿ ಪ್ರಚಾರ - Lok Sabha Election 2024 - LOK SABHA ELECTION 2024
🎬 Watch Now: Feature Video
Published : Apr 21, 2024, 9:19 PM IST
ತುಮಕೂರು: ತಮಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ವಿರುದ್ಧ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಬಹಿರಂಗ ಪ್ರಚಾರದಲ್ಲಿ ಕೆಲಸ ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ಸಹ ನೀಡಿದ್ದರು.
ಮಾಧುಸ್ವಾಮಿ ಈ ಹಿಂದೆ ಪ್ರತಿನಿಧಿಸುತ್ತಿದ್ದ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಸ್ಥಳೀಯ ಕೆಲ ಬಿಜೆಪಿ ಮುಖಂಡರು ಹಾಗೂ ಜೆಡಿಎಸ್ನ ಶಾಸಕ ಸುರೇಶ್ ಬಾಬು ಅವರೊಂದಿಗೆ ಭರ್ಜರಿ ಪ್ರಚಾರ ನಡೆಸಿದರು.
ಎನ್‌ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣನವರು ಇಂದು ಹುಳಿಯಾರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮುಖ್ಯಪ್ರಾಣ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ಹುಳಿಯಾರು ಪಟ್ಟಣದಲ್ಲಿ ಚುನಾವಣಾ ಪ್ರಚಾರ ಪ್ರಾರಂಭಿಸಿದರು.
ಜೆಡಿಎಸ್ ಶಾಸಕ ಸಿಬಿ ಸುರೇಶ್ ಬಾಬು, ಬಿಜೆಪಿಯ ಎಂ ಡಿ ಲಕ್ಷ್ಮೀನಾರಾಯಣ್, ರಾಮಚಂದ್ರಯ್ಯ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಪಾಲ್ಗೊಂಡಿದ್ದರು. ಸ್ಥಳೀಯ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರೊಂದಿಗೆ ಶಾಸಕ ಸುರೇಶ್ ಬಾಬು ಅವರು ಸೋಮಣ್ಣ ಪರವಾಗಿ ಮತಯಾಚನೆಯಲ್ಲಿ ತೊಡಗಿರುವುದು ಒಂದು ರೀತಿ ಮಾಧುಸ್ವಾಮಿಯವರಿಗೆ ತೀವ್ರ ಇರಿಸುಮುರಿಸು ಉಂಟಾಗಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಮಾಧುಸ್ವಾಮಿ ಅವರ ತಟಸ್ಥ ನಿಲುವು ಇಂದು ನಡೆದ ಪ್ರಚಾರ ಸಭೆಯಲ್ಲಿ ಕಂಡು ಬಂದಿತು. ಮಾಧುಸ್ವಾಮಿ ಅವರ ಬೆಂಬಲಿತ ಮತದಾರರು ಯಾವ ನಿಲುವು ತೆಗೆದುಕೊಳ್ಳಲಿದ್ದಾರೆ ಎಂಬುದು ಒಂದು ರೀತಿ ನಿಗೂಢವಾಗಿದೆ ಎಂದು ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳಲ್ಲಿ ಚರ್ಚೆಯಾಗುತ್ತಿದೆ.
ಇದನ್ನೂಓದಿ:ಈ ಲೋಕಸಭಾ ಚುನಾವಣೆಯಲ್ಲಿ 27 ಸೀಟ್ಗಳನ್ನು ಬಿಜೆಪಿ ಗೆಲ್ಲಲಿದೆ: ಆರ್ ಅಶೋಕ್ - Lok Sabha Election 2024