ಬೀದರ್: ಕೆಮಿಕಲ್ ಗ್ಯಾಸ್ ಸೋರಿಕೆಯಿಂದ ಇಬ್ಬರು ಯುವಕರು ಸಾವು - ಶ್ರೀ ಪ್ರಸನ್ನ ಪ್ರೀ ಪೋಸೆಸಿಂಗ್
🎬 Watch Now: Feature Video
Published : Jan 22, 2024, 12:29 PM IST
ಬೀದರ್: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕೆಮಿಕಲ್ ಗ್ಯಾಸ್ ಸೋರಿಕೆಯಿಂದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ.
ಶ್ರೀ ಪ್ರಸನ್ನ ಪ್ರೀ ಪೋಸೆಸಿಂಗ್ ಲಿಮಿಟೆಡ್ ಕಂಪನಿಯಲ್ಲಿ ಅವಘಡ ಸಂಭವಿಸಿದ್ದು, ಮೃತಪಟ್ಟವರನ್ನು ಬೀದರ್ ತಾಲೂಕಿನ ವಡ್ಡನಕೇರಾ ಗ್ರಾಮದ ಮಹಮ್ಮದ್ ಶಾಬಾದ್ (21) ಹಾಗೂ ಮಧ್ಯ ಪ್ರದೇಶ ಮೂಲದ ಇಂದ್ರಜಿತ್ (23) ಎಂದು ಗುರುತಿಸಲಾಗಿದೆ. ಕಾರ್ಖಾನೆಯೊಳಗೆ ಕೆಲಸ ನಡೆಯುತ್ತಿದ್ದ ವೇಳೆ ದುರಂತ ನಡೆದಿದೆ. ಮೃತದೇಹಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ನೂರಾರು ಜನರು ಆಸ್ಪತ್ರೆ ಬಳಿ ಜಮಾಯಿಸಿದ್ದರು. ಈ ವೇಳೆ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿದೆ. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್. ಎಲ್, ಶಾಸಕ ಸಿದ್ದು ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ನೋಡಿ: ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ: 5 ಲಕ್ಷ ನಗದು ಸೇರಿ ಲಕ್ಷಾಂತರ ಮೌಲ್ಯದ ವಸ್ತು ಬೆಂಕಿಗಾಹುತಿ