ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​​ರಿಂದ ಮಧ್ಯಂತರ ಬಜೆಟ್ ಮಂಡನೆ: ನೇರಪ್ರಸಾರ - Interim Budget 2024 Live

🎬 Watch Now: Feature Video

thumbnail

By ETV Bharat Karnataka Team

Published : Feb 1, 2024, 11:02 AM IST

Updated : Feb 1, 2024, 12:02 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಈ ಅವಧಿಯ ಕೊನೆಯ ಹಾಗೂ ಮಧ್ಯಂತರ ಬಜೆಟ್​-2024 ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿಂದು ಮಂಡಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಧ್ಯಂತರ ಬಜೆಟ್​ ಮೇಲೆ ನಿರೀಕ್ಷೆಗಳು ಗರಿಗೆದರಿವೆ. 

ನಿರ್ಮಲಾ ಸೀತಾರಮನ್ ಅವರು ಆರನೇ ಬಾರಿ ಕೇಂದ್ರ ಆಯವ್ಯಯ ಮಂಡಿಸುತ್ತಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ದಾಖಲೆ ಸರಿಗಟ್ಟಿದ್ದಾರೆ.

ಲೋಕಸಭೆ ಚುನಾವಣೆಯ ಬಳಿಕ ಹೊಸ ಸರ್ಕಾರ ರಚನೆ ಆಗುವವರೆಗೆ ಮಾತ್ರ ಈ ಮಧ್ಯಂತರ ಬಜೆಟ್ ಅನ್ವಯವಾಗಲಿದೆ. ಅಂದರೆ, 2024ರ ಏಪ್ರಿಲ್​ನಿಂದ ಜೂನ್‌ವರೆಗಿನ ಸಿಬ್ಬಂದಿ ವೇತನ ಮತ್ತು ಇತರ ಅಗತ್ಯ ವೆಚ್ಚಗಳನ್ನು ನಿಭಾಯಿಸುವ ಸಲುವಾಗಿ ಈ ಆಯವ್ಯಯ ಇರಲಿದೆ. ಆ ಬಳಿಕ ಅಧಿಕಾರಕ್ಕೆ ಬರುವ ಸರ್ಕಾರ ಜೂನ್​ ಅಥವಾ ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್​ ಮಂಡಿಸಲಿದೆ. 

ಜ.31ರಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ಫೆಬ್ರವರಿ 9ರವರೆಗೆ ನಡೆಯಲಿದೆ. ಇಂದು ಲೋಕಸಭೆಯಲ್ಲಿ ಹಣಕಾಸುವ ಸಚಿವೆ ನಿರ್ಮಲಾ ಸೀತಾರಾಮನ್​ ಆಯವ್ಯಯ ಮಂಡಿಸುತ್ತಿದ್ದಾರೆ. ಬಳಿಕ ಬಜೆಟ್​ಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಒಪ್ಪಿಗೆ ಪಡೆಯಲಾಗುತ್ತದೆ. 

ಇದನ್ನೂ ಓದಿ: ಕೇಂದ್ರ ಬಜೆಟ್​​ 2024: ಭಾರತದ ಒಟ್ಟು ಸಾಲ ಎಷ್ಟು? ಇಲ್ಲಿದೆ ಕಿರುನೋಟ

Last Updated : Feb 1, 2024, 12:02 PM IST

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.