ಮೈಸೂರಿನಲ್ಲಿ ಅಮಿತ್ ಶಾ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ: ನೇರಪ್ರಸಾರ - Amit Shah
🎬 Watch Now: Feature Video
Published : Feb 11, 2024, 12:28 PM IST
|Updated : Feb 11, 2024, 1:29 PM IST
ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಶೇಷ ವಿಮಾನದಲ್ಲಿ ಇಂದು ನಸುಕಿನ ಜಾವ ಮೈಸೂರಿಗೆ ಆಗಮಿಸಿದ್ದಾರೆ. ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ರಾಜ್ಯ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಶಾ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಬೆಳಿಗ್ಗೆ 11 ಗಂಟೆಗೆ ಚಾಮುಂಡಿ ಬೆಟ್ಟದಲ್ಲಿರುವ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ ನಂತರ 12 ಗಂಟೆಗೆ ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಕೂಡಾ ಜಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಸುತ್ತೂರು ಜಾತ್ರೆಯಲ್ಲಿ ಶಾ ಪಾಲ್ಗೊಳ್ಳುತ್ತಿರುವುದು ರಾಜಕೀಯವಾಗಿಯೂ ಮಹತ್ವ ಪಡೆದಿದೆ. ಭಕ್ತರು ಮತ್ತು ಲಿಂಗಾಯತ ಸಮುದಾಯದೊಂದಿಗೆ ಸಂಪರ್ಕ ಸಾಧಿಸುವುದು ಈ ಭೇಟಿಯ ಉದ್ದೇಶವೆಂದೂ ವಿಶ್ಲೇಷಿಸಲಾಗುತ್ತಿದೆ.
ಇದಾದ ನಂತರ ಖಾಸಗಿ ಹೋಟೆಲ್‌ನಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ನಡೆಸುವರು. ಈ ಸಂದರ್ಭದಲ್ಲಿ ಮೈಸೂರು-ಕೊಡಗು, ಹಾಸನ, ಮಂಡ್ಯ ಮತ್ತು ಚಾಮರಾಜನಗರ ಕ್ಷೇತ್ರಗಳ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ. ಗೃಹ ಸಚಿವರ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸರು ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.