ನವೀಲುತೀರ್ಥ ಡ್ಯಾಂನಿಂದ ನೀರು ಬಿಡುಗಡೆ: ಒಂದೆಡೆ ಮೊಸಳೆ ಮತ್ತೊಂದೆಡೆ ಪ್ರವಾಹ ಆತಂಕ - Navilutheertha Reservoir
🎬 Watch Now: Feature Video
Published : Jul 28, 2024, 10:00 AM IST
ಬೆಳಗಾವಿ: ಖಾನಾಪುರ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದಿಂದ ನೀರು ಹೊರಬಿಡಲಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಮುನವಳ್ಳಿ ಸಮೀಪ ಕಟ್ಟಲಾಗಿರುವ ಈ ಜಲಾಶಯ 2,079.50 ಅಡಿ ಎತ್ತರವಿದ್ದು, ಈಗಾಗಲೇ 2,072 ಅಡಿ ನೀರು ಸಂಗ್ರಹವಿದೆ. ಜಲಾಶಯ ಭರ್ತಿಗೆ 7 ಅಡಿ ಬಾಕಿ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನದಿಗೆ ನೀರು ಬಿಡಲಾಗಿದೆ.
ಮಲಪ್ರಭಾ ನದಿಗೆ 20 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಹಾಗಾಗಿ, 1,000ದಿಂದ 5,000 ಕ್ಯೂಸೆಕ್ ನೀರು ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಮದುರ್ಗ, ಮುನವಳ್ಳಿ ಸೇರಿದಂತೆ ಮಲಪ್ರಭಾ ತೀರದ ಜನರು ಪ್ರವಾಹದ ಆತಂಕ ಎದುರಿಸುತ್ತಿದ್ದಾರೆ.
ಮೊಸಳೆ ಪ್ರತ್ಯಕ್ಷ: ಉಕ್ಕಿ ಹರಿಯುತ್ತಿರುವ ನದಿ ತಟದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಬೈಲಹೊಂಗಲ ತಾಲೂಕಿನ ಮಾಟೋಳ್ಳಿ ಗ್ರಾಮದ ಬಳಿ ನದಿ ದಂಡೆಯ ಮೇಲೆ ಕಾಣಿಸಿಕೊಂಡಿದ್ದು, ಸ್ಥಳೀಯರು ಮೊಬೈಲ್ಗಳಲ್ಲಿ ದೃಶ್ಯ ಸೆರೆಹಿಡಿದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮೊಸಳೆ ಪತ್ತೆ ಹಚ್ಚಿ ಸ್ಥಳಾಂತರಿಸುವಂತೆ ಜನರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ದೆಹಲಿ: IAS ಕೋಚಿಂಗ್ ಕೇಂದ್ರದ ನೆಲಮಾಳಿಗೆಗೆ ನುಗ್ಗಿದ ನೀರು; ಮೂವರು ವಿದ್ಯಾರ್ಥಿಗಳು ಸಾವು - Coaching Centre Flooded