ಖಾನಾಪುರ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ: ಕಾರ್ಯಾಚರಣೆಯ ವಿಡಿಯೋ - WILD ELEPHANT CAPTURED

🎬 Watch Now: Feature Video

thumbnail

By ETV Bharat Karnataka Team

Published : Jan 10, 2025, 8:31 AM IST

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಕರಂಬಳ, ಚಾಪಗಾಂವ್ ಸೇರಿ ಹಲವೆಡೆ ಕಾಡಾನೆ ಹಾವಳಿಗೆ ರೈತರು ನಲುಗಿ ಹೋಗಿದ್ದರು. ಕಬ್ಬು ಮತ್ತಿತರ ಬೆಳೆಗಳನ್ನು ಆನೆ ಹಾಳು ಮಾಡುತ್ತಿದ್ದುದರಿಂದ ಕಂಗಾಲಾಗಿದ್ದರು.

ಕಾಡಾನೆ ಹಾವಳಿಗೆ ಕಂಗೆಟ್ಟಿದ್ದ ಖಾನಾಪುರದ ರೈತರಿಗೆ ಇದೀಗ ಮುಕ್ತಿ ಸಿಕ್ಕಿದೆ ಎನ್ನಬಹುದು. ಶಿವಮೊಗ್ಗದ ಸಕ್ರೆಬೈಲು ಬಿಡಾರದಿಂದ ಬಂದಿದ್ದ ನುರಿತ ಆನೆಗಳ ಸಹಾಯದಿಂದ ಕಾಡಾನೆಯನ್ನು ಸೆರೆ ಹಿಡಿಯಲಾಯಿತು. 

ಇದನ್ನೂ ಓದಿ: ರಾಮನಗರದಲ್ಲಿ ಕ್ಯಾಪ್ಟನ್ ಮಹೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ: ಒಂದು ಕಾಡಾನೆ ಸೆರೆ - WILD ELEPHANT CAPTURE OPERATION

ಖಾನಾಪುರ ಎಸಿಎಫ್ ಸುನೀತಾ ನಿಂಬರಗಿ ನೇತೃತ್ವದಲ್ಲಿ ನಿನ್ನೆ (ಗುರುವಾರ) ಬೆಳಿಗ್ಗೆಯಿಂದ ಸಂಜೆಯವರೆಗೂ ಸೆರೆ ಕಾರ್ಯಾಚರಣೆ ನಡೆಯಿತು. 

ಕಾರ್ಯಾಚರಣೆಯಲ್ಲಿ ಖಾನಾಪುರ ಆರ್​ಎಫ್ಓ ಶ್ರೀಕಾಂತ್ ಪಾಟೀಲ, ನಂದಗಡ ವಲಯ ಅರಣ್ಯ ಅಧಿಕಾರಿ ಮಾಧುರಿ ದಳವಾಯಿ ಸೇರಿದಂತೆ ಹಲವು ಸಿಬ್ಬಂದಿ ಭಾಗಿಯಾಗಿದ್ದರು.

ಇದನ್ನೂ ಓದಿ : ಚನ್ನಪಟ್ಟಣ ತಾಲೂಕಿನಲ್ಲಿ ಎರಡನೇ ಕಾಡಾನೆ ಸೆರೆ ; ಹೀಗಿತ್ತು ಕಾರ್ಯಾಚರಣೆ - WILD ELEPHANT CAPTURED

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.