ಚಾಮರಾಜನಗರದಲ್ಲಿ 'ಯುವ' ಸಾಂಗ್ ರಿಲೀಸ್ ಈವೆಂಟ್ - LIVE - ಯುವ ರಾಜ್ಕುಮಾರ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/02-03-2024/640-480-20890079-thumbnail-16x9-newss.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Mar 2, 2024, 7:02 PM IST
|Updated : Mar 2, 2024, 9:26 PM IST
ಚಾಮರಾಜನಗರ: ಶ್ರೀ ಚಾಮರಾಜೇಶ್ವರ ಸ್ವಾಮಿ ದೇಗುಲದ ಮುಂಭಾಗ 'ಯುವ' ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನಡೆಯುತ್ತಿದ್ದು, ಯುವ ಚಿತ್ರದ ನಾಯಕ ನಟ ಯುವ ರಾಜ್ಕುಮಾರ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದು, ಪವರ್ ಸ್ಟಾರ್ ಅಪ್ಪು ಎಂದು ಘೋಷಣೆ ಕೂಗುತ್ತಿದ್ದಾರೆ. ಪುನೀತ್ ರಾಜ್ಕುಮಾರ್ ಅವರ ಹಾಡುಗಳನ್ನು ಕೂಡ ಹಾಡಲಾಗುತ್ತಿದೆ.ವರನಟ ಡಾ. ರಾಜ್ಕುಮಾರ್ ಅವರ ಮೊಮ್ಮಗ ಯುವ ರಾಜ್ಕುಮಾರ್ ತೆರೆ ಮೇಲೆ ಬರಲು ಕೆಲವೇ ದಿನಗಳು ಬಾಕಿ ಉಳಿದಿವೆ. ಇದಿಗ ನಟನ ಚೊಚ್ಚಲ ಚಿತ್ರದ ಮೊದಲ ಹಾಡು ಅನಾವರಣಗೊಳ್ಳಲಿದ್ದು, ಪ್ರೇಕ್ಷಕರ ಕುತೂಹಲ ಹೆಚ್ಚಿದೆ. ಚಾಮರಾಜನಗರದಲ್ಲಿ ಆಯೋಜಿಸಲಾಗಿರೋ ಈ ಅದ್ಧೂರಿ ಸಮಾರಂಭದಲ್ಲಿ "ಒಬ್ಬನೇ ಶಿವ ಒಬ್ಬನೇ ಯುವ" ಹಾಡು ಅನಾವರಣಗೊಳ್ಳಲಿದೆ. ಚೊಚ್ಚಲ ಚಿತ್ರದ ಮೊದಲ ಹಾಡು ವೀಕ್ಷಿಸಲು ಅಭಿಮಾನಿಗಳು ಕಾತರರಾಗಿದ್ದಾರೆ. ದಕ್ಷಿಣ ಚಿತ್ರರಂಗದ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿರುವ 'ಯುವ' ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಹುತೇಕ ಪೂರ್ಣಗೊಂಡಿದ್ದು, ಇಂದು ಹಾಡು ಬಿಡುಗಡೆ ಆಗಲಿದೆ. ಈ ತಿಂಗಳಾಂತ್ಯ ಸಿನಿಮಾ ತೆರೆಗಪ್ಪಳಿಸಲಿದೆ. ಕಾರ್ಯಕ್ರಮದ ನೇರಪ್ರಸಾರ ಇಲ್ಲಿದೆ.
Last Updated : Mar 2, 2024, 9:26 PM IST