ETV Bharat / snippets

ಮೈಸೂರು: 11 ವರ್ಷದ ಬಾಲಕ ಆತ್ಮಹತ್ಯೆ

SUICIDE
ಆತ್ಮಹತ್ಯೆ (ETV Bharat)
author img

By ETV Bharat Karnataka Team

Published : Jul 31, 2024, 7:25 AM IST

ಮೈಸೂರು: ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. 5ನೇ ತರಗತಿ ವಿದ್ಯಾರ್ಥಿ ಕುಶಾಲ್ (11) ಸಾವನ್ನಪ್ಪಿದ್ದಾನೆ. ಈತನ ತಂದೆ ದೇಸಿಗೌಡ ಪೊಲೀಸ್ ಕಾನ್ಸ್​ಟೇಬಲ್​ ಆಗಿದ್ದು, ತಾಯಿ ಲಕ್ಷ್ಮಿ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಯೋಗ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಿನ್ನೆ ಲಕ್ಷ್ಮಿ ಇಸ್ಕಾನ್ ದೇವಾಲಯಕ್ಕೆ ಹೋಗಿದ್ದರೆ, ತಂದೆಯೂ ಕೆಲಸ ನಿಮಿತ್ತ ಮನೆಯಿಂದ ತೆರಳಿದ್ದರು. ಮಧ್ಯಾಹ್ನ ಎರಡೂವರೆ ಗಂಟೆಯ ಸುಮಾರಿಗೆ ಶಾಲೆಯಿಂದ ‌ಮನೆಗೆ ಬಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಯಿ ಮನೆಗೆ ಬಂದಾಗ‌ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣ ಕುಣಿಕೆಯಿಂದ ಇಳಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಬಾಲಕ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಬುಧವಾರ ಮೃತದೇಹದ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಕ್ಕಳಿಲ್ಲದ ಕೊರಗು, ಅನಾರೋಗ್ಯ ಸಮಸ್ಯೆ: ದಾವಣಗೆರೆಯಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ - COUPLE SUICIDE

ETV Bharat Logo

Copyright © 2024 Ushodaya Enterprises Pvt. Ltd., All Rights Reserved.