ತುಮಕೂರು: ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಮುಗಿಸಿ ವಾಪಸ್ ಮನೆಗೆ ಮರಳುವ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹೆಚ್.ಕಾವಲ್ ಬಳಿ ಇಂದು ನಡೆದಿದೆ. ಹೇಮಂತ್ (8) ಮೃತ ವಿದ್ಯಾರ್ಥಿ.
ಹೆಚ್.ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್, ಇಂದು ಬೆಳಗ್ಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ತೆರಳುತ್ತಿದ್ದ. ಈ ಸಂದರ್ಭದಲ್ಲಿ ರಸ್ತೆ ಬದಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಮುಟ್ಟಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ತಂತಿ ಸರಿಪಡಿಸುವಂತೆ ಹಲವು ಬಾರಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಇಂದಿನ ಘಟನೆ ಬಗ್ಗೆ ಮಧ್ಯಾಹ್ನವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಆದರೆ, ಈವರೆಗೂ ಯಾರೂ ಬಂದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶೀರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.