ಮೈಸೂರು : ಏಕಾಏಕಿ ಮನೆಯೊಳಗೆ ಚಿರತೆ ನುಗ್ಗಿ ಲಾಕ್ ಆಗಿರುವ ಘಟನೆ ನಂಜನಗೂಡು ತಾಲೂಕಿನ ಯಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿರತೆಯೊಂದು ಕಾಡಿನಿಂದ ನಾಡಿಗೆ ಬಂದು ಗ್ರಾಮದ ವ್ಯಕ್ತಿಯೊಬ್ಬರ ಮನೆಗೆ ಏಕಾಏಕಿ ನುಗ್ಗಿತ್ತು. ಇದನ್ನು ಕಂಡ ಗ್ರಾಮಸ್ಥರು ತಬ್ಬಿಬ್ಬಾಗಿದ್ದರು. ಪಾಳು ಬಿದ್ದ ಮನೆ ಒಳಗೆ ಸೇರಿಕೊಂಡಿದ್ದ ಚಿರತೆಯನ್ನು ಗ್ರಾಮಸ್ಥರು ಲಾಕ್ ಮಾಡಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದರು.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಸುಮಾರು ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಅರವಳಿಕೆ ಮದ್ದು ನೀಡಿ ಕೊನೆಗೂ ಚಿರತೆಯನ್ನು ಸೆರೆಹಿಡಿದಿದ್ದಾರೆ. ಇದೀಗ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ : ಕೊನೆಗೂ ಬೋನಿಗೆ ಬಿತ್ತು ಚಿರತೆ; 15 ದಿನಗಳ ಆಪರೇಷನ್ ಅಂತ್ಯ