ಬೆಂಗಳೂರು: ಮಹಿಳೆಯೊಬ್ಬರನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯ ವಿಂಡ್ಸರ್ ಮ್ಯಾನರ್ ಹೋಟೆಲ್ ಬಳಿ ನಡೆದಿದೆ. ಸೋಮಿನಿ ಸತ್ಯಭಾಮಾ (46) ಹತ್ಯೆಯಾದ ಮಹಿಳೆ. ಸ್ಟಾಫ್ ನರ್ಸ್ ಅಗಿದ್ದ ಸತ್ಯಭಾಮಾ ತಡರಾತ್ರಿ ಕೆಲಸ ಮುಗಿಸಿ ಪಾರ್ಕಿಂಗ್ ಸ್ಥಳದ ಬಳಿ ಬಂದಿದ್ದರು. ಅವರು ಬರುವುದಕ್ಕಾಗೇ ಕಾದು ಕುಳಿತಿದ್ದ ಹಂತಕರು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಆಸ್ತಿ ವ್ಯಾಜ್ಯದ ವಿಚಾರವಾಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಹತ್ಯೆ ಬಳಿಕ ಘಟನಾ ಸ್ಥಳದಿಂದ ಎಸ್ಕೇಪ್ ಆದ ಹಂತಕರ ಪೈಕಿ ಮೂವರು ಚಾಮರಾಜಪೇಟೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ಮೂವರನ್ನು ಬಂಧಿಸಿರುವ ಚಾಮರಾಜಪೇಟೆ ಠಾಣಾ ಪೊಲೀಸರು, ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ: ಆರೋಪಿಗಳು ಬಳಸಿದ್ದ 2 ವಾಹನ ಜಪ್ತಿ - Renukaswamy Murder case