ETV Bharat / snippets

ಇಲಿ ಜ್ವರ: ಶಿವಮೊಗ್ಗದ ಯುವತಿ ಮಂಗಳೂರಿನಲ್ಲಿ ಸಾವು

author img

By ETV Bharat Karnataka Team

Published : Jul 25, 2024, 3:38 PM IST

Updated : Jul 25, 2024, 4:38 PM IST

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವತಿಯೊಬ್ಬಳು ಇಲಿ ಜ್ವರದಿಂದ ಮಂಗಳವಾರ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದ ಆರ್.ಪಲ್ಲವಿ (21) ಕಳೆದ 20 ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಅವರನ್ನು ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್. ಆರ್. ತಿಮ್ಮಯ್ಯ ಪ್ರತಿಕ್ರಿಯಿಸಿ, "ಶಿವಮೊಗ್ಗ ಜಿಲ್ಲೆಯ ಯುವತಿ ಇಲಿ ಜ್ವರದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಇದು ಶಿವಮೊಗ್ಗ ಜಿಲ್ಲೆಯ ಪ್ರಕರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇರೆ ಯಾವುದೇ ಇಲಿ ಜ್ವರ ಪ್ರಕರಣಗಳು ಇಲ್ಲ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಡೆಂಗ್ಯೂ ಬಳಿಕ ಇಲಿ ಜ್ವರ ಪತ್ತೆ; ಜನರ ಆತಂಕ - Rat Fever

Last Updated : Jul 25, 2024, 4:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.