ETV Bharat / snippets

ಮಂಡ್ಯ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ; ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ

author img

By ETV Bharat Karnataka Team

Published : Jul 13, 2024, 9:00 AM IST

car Accident
ಕಾರು ಅಪಘಾತ (ETV Bharat)

ಮಂಡ್ಯ: ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಾಯಗಳಾಗಿರುವ ಘಟನೆ ಮೈಸೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರುದ್ರಾಕ್ಷಿಪುರ ಗ್ರಾಮದ ಬಳಿ ಜರುಗಿದೆ. ಬೆಂಗಳೂರಿನ ಬಗಲಕುಂಟೆ ನಿವಾಸಿಗಳಾದ ಕಲಾ (40), ಪುತ್ರ ದರ್ಶನ್ ( 21) ಮೃತಪಟ್ಟಿದ್ದಾರೆ. ಕಾರಿನ ಹಿಂಬದಿಯಲ್ಲಿದ್ದ ಪುತ್ರಿ ಮೇಘನ ಹಾಗೂ ಅಳಿಯ ಮಂಜುನಾಥ್ ಗಾಯಗೊಂಡಿದ್ದಾರೆ.

ಚಾಮುಂಡಿ ಬೆಟ್ಟದಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ರಸ್ತೆ ವಿಭಜಕ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಪುತ್ರ ಸ್ಥಳದಲ್ಲೇ ಸಾವನ್ನಪ್ಪಿ, ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಮಿಮ್ಸ್ ಶವಾಗಾರಕ್ಕೆ ಮೃತ ದೇಹಗಳನ್ನು ರವಾನಿಸಲಾಯಿತು. ಮದ್ದೂರು ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಾಗಿದೆ.

ಇದನ್ನೂ ಓದಿ: ಪ್ರಯಾಣಿಕರೇ ಗಮನಿಸಿ; ಕಾಮಗಾರಿ ಹಿನ್ನೆಲೆ ನೈರುತ್ಯ ರೈಲ್ವೆ ಸೇವೆಯಲ್ಲಿ ಬದಲಾವಣೆ - South Western Railway

ETV Bharat Logo

Copyright © 2024 Ushodaya Enterprises Pvt. Ltd., All Rights Reserved.