ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮ ನಿಯಮಿತದಲ್ಲಿನ (ಡಿಡಿಯುಟಿಟಿಎಲ್) ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮಾಗಡಿ ಉಪ ವಿಭಾಗದ ಪಂಚಾಯತ್ ರಾಜ್ ಇಲಾಖೆ ಎಇಇ ಚರಣ್ ಕುಮಾರ್ ಎಂಬವರನ್ನು ಬಂಧಿಸಲಾಗಿದೆ.
ಜಲಸಂಪನ್ಮೂಲ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚರಣ್ ಕುಮಾರ್ ಅವರನ್ನು ನಿಯೋಜನೆಯ ಮೇರೆಗೆ ಡಿಡಿಯುಟಿಟಿಎಲ್‌ಗೆ ವರ್ಗಾವಣೆ ಮಾಡಲಾಗಿತ್ತು. ನಿಗಮದಲ್ಲಿ ಕಾಮಗಾರಿಗಳು ನಡೆಯದಿದ್ದರೂ ಸಹ ಸುಮಾರು 300ಕ್ಕೂ ಕಾಮಗಾರಿಗಳು ಪೂರ್ಣಗೊಂಡಿರುವುದಾಗಿ ದೃಢೀಕರಿಸಿದ್ದ ಆರೋಪದಡಿ ಚರಣ್ ಕುಮಾರ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಚಾರಣೆ ವೇಳೆ 'ಹಿರಿಯ ಅಧಿಕಾರಿಗಳು ಹಾಗೂ ರಾಜಕೀಯ ಒತ್ತಡದಿಂದ ತಾವು ದೃಢೀಕರಣ ನೀಡಿದ್ದಾಗಿ' ಚರಣ್ ಕುಮಾರ್ ಹೇಳಿಕೆ ನೀಡಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಸದ್ಯ ಆರೋಪಿಗೆ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಇದನ್ನೂ ಓದಿ: ಹಿಂಡಲಗಾ ಜೈಲಿನಲ್ಲಿ ಮಾರಾಮಾರಿ: ವಿಚಾರಣಾ ಕೈದಿಗೆ ಗಂಭೀರ ಗಾಯ - Hindalaga Jail Prisoners Fight