ವಿಜಯನಗರ: ಕರ್ತವ್ಯ ನಿರತ ಪೊಲೀಸ್ ಕಾನ್ಸ್ಟೆಬಲ್ವೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬುಧವಾರ ಮುಂಜಾನೆ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸಿಕೇರೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಕೆ. ಕೋಟೆಪ್ಪ (36) ಮೃತಪಟ್ಟವರು.
ರಾತ್ರಿ ಕರ್ತವ್ಯದಲ್ಲಿದ್ದ ಕೆ.ಕೋಟೆಪ್ಪ ಅವರಿಗೆ ಬೆಳಗ್ಗೆ 5 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಸಿಬ್ಬಂದಿಯ ನೆರವಿನೊಂದಿಗೆ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಕೋಟೆಪ್ಪ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಕಾನ್ಸ್ಟೇಬಲ್ಗೆ ಎರಡು ವರ್ಷದ ಪುತ್ರಿ ಇದ್ದು, ಪತ್ನಿ 6 ತಿಂಗಳ ಗರ್ಭಿಣಿ ಇದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ: ಚಿಕ್ಕೋಡಿ: ಮದುವೆಗೆ ಒಂದು ದಿನ ಮುನ್ನ ಹೃದಯಾಘಾತದಿಂದ ಯುವಕ ಸಾವು! - Heart Attack