ETV Bharat / snippets

ಡ್ರಗ್ಸ್​ ವಿರುದ್ಧ ಹು-ಧಾ ಪೊಲೀಸರ ಸ್ಪೆಷಲ್​ ಡ್ರೈವ್: 79 ವಿದ್ಯಾರ್ಥಿಗಳು ವಶಕ್ಕೆ

author img

By ETV Bharat Karnataka Team

Published : Aug 19, 2024, 6:54 AM IST

hubballi
ಹುಬ್ಬಳ್ಳಿ (drugs case)

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರೇಟ್​​ನ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮಾದಕವಸ್ತು ಸೇವಿಸುವವರ ವಿರುದ್ಧ ಭಾನುವಾರ ಮತ್ತೊಂದು ಹಂತದ ಕಾರ್ಯಾಚರಣೆ ನಡೆದಿದೆ. ಒಟ್ಟು 354 ಜನ ಡ್ರಗ್ಸ್ ಬಳಕೆದಾರರನ್ನು ವಶಕ್ಕೆ ಪಡೆದು, ಹುಬ್ಬಳ್ಳಿ ಕಿಮ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್​ನಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ಅವರಲ್ಲಿ ಒಟ್ಟು 156 ಜನರಲ್ಲಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ವಿವಿಧ ಠಾಣೆಗಳಲ್ಲಿ ಒಟ್ಟು 38 ಪ್ರಕರಣಗಳನ್ನು ದಾಖಲಿಸಲಾಗಿದೆ. ಡ್ರಗ್ಸ್ ಸೇವನೆ ದೃಢಪಟ್ಟಿರುವ 156 ಜನರಲ್ಲಿ 79 ಜನ ಅವಳಿ ನಗರದ ವಿವಿಧ ಶಾಲೆ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ. ಮಾದಕವಸ್ತುಗಳ ಸೇವನೆ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಈ ಎಲ್ಲ ಡ್ರಗ್ಸ್ ಬಳಕೆದಾರರಿಗೆ ಹುಬ್ಬಳ್ಳಿಯ‌ ಜಗದ್ಗುರು ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಮಾದಕ ವಸ್ತುಗಳ ಸೇವನೆ ಮಾಡದಂತೆ ಮತ್ತು ಉತ್ತಮ ಭವಿಷ್ಯಕ್ಕಾಗಿ ಪೊಲೀಸರು ಕೌನ್ಸೆಲಿಂಗ್ ನಡೆಸಿದ್ದಾರೆ. ಪೋಷಕರಿಗೂ ಕೂಡ ಮಕ್ಕಳ ಬಗೆಗಿನ ಕಾಳಜಿಯ ಓರಿಯೆಂಟೇಶನ್ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.