ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29), ಉಡುಪಿ ಸಂತೆಕಟ್ಟೆಯ ಚರಣ್.ಯು.ಭಂಡಾರಿ (19) ಬಂಧಿತರು.
ಇವರಿಂದ 53,300 ರೂ. ಮೌಲ್ಯದ 740 ಗ್ರಾಂ ಗಾಂಜಾ, 25 ಸಾವಿರ ರೂ. ಮೌಲ್ಯದ ಸ್ಕೂಟರ್, 2,170 ರೂ. ನಗದು, 2 ಮೊಬೈಲ್ ಮತ್ತು ಚೂರಿಯನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 98,770 ರೂ. ಎಂದು ಅಂದಾಜಿಸಲಾಗಿದೆ. ಉಳಿದ ಆರೋಪಿಗಳಿಗೆ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.
ಇದನ್ನೂ ಓದಿ: ಮನೆಯಲ್ಲಿ ಗಾಂಜಾ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ