ETV Bharat / snippets

ಚಾಮರಾಜನಗರ: ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರ ಬಂಧನ

author img

By ETV Bharat Karnataka Team

Published : Sep 22, 2024, 4:21 PM IST

ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ
ಶ್ರೀಗಂಧದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ (ETV Bharat)

ಚಾಮರಾಜನಗರ: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಲೆ ಮಹದೇಶ್ವರ ವನ್ಯಜೀವಿದಾಮದ ಪಿ.ಜಿ. ಪಾಳ್ಯ ವನ್ಯಜೀವಿ ವಲಯದಲ್ಲಿ ನಡೆದಿದೆ. ಹನೂರು ತಾಲೂಕಿನ ತಾಲೂಕಿನ ಸತ್ಯಮಂಗಲ ಗ್ರಾಮದ ನಿವಾಸಿಗಳಾದ ಮಾದರಾಜು, ಎಂ ನಾಗೇಂದ್ರ ಬಂಧಿತರಾಗಿದ್ದು, ಮತ್ತೋರ್ವ ಆರೋಪಿ ಮೂರ್ತಿ ಪರಾರಿಯಾಗಿದ್ದಾನೆ.

ಹನೂರು ತಾಲೂಕಿನ ಪಿ.ಜಿ. ಪಾಳ್ಯ ವನ್ಯಜೀವಿ ವಲಯದ ದೊಡ್ಡಕೋಬೆ ಹಳ್ಳ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಗಳು ಗಸ್ತಿನಲ್ಲಿದ್ದ ಸಂದರ್ಭದಲ್ಲಿ ಬೈಕ್​ನಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಮೂವರ ಪೈಕಿ ಇಬ್ಬರನ್ನು ಬಂಧಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಒಂಬತ್ತು ಕೆ.ಜಿ. ಹಸಿ ಶ್ರೀಗಂಧದ ಮರದ ತುಂಡುಗಳು ಹಾಗೂ ದ್ವಿಚಕ್ರ ವಾಹನ, ಇತರೆ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಸಿಸಿಎಫ್ ಕಚೇರಿ ಆವರಣದಲ್ಲೇ ಮರಗಳ ಕಡಿತ: ಕಾರಣ ಕೇಳಿ ಸಚಿವ ಈಶ್ವರ್ ಖಂಡ್ರೆ ನೋಟಿಸ್ - Trees Cut In CCF Office Premises

ETV Bharat Logo

Copyright © 2024 Ushodaya Enterprises Pvt. Ltd., All Rights Reserved.