ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆ ಎಎಸ್ಐ ಶಿವಶಂಕರ ಚಾರಿ(45) ಮೃತರು.
ಶಿವಶಂಕರ ಅವರು ಗುರುವಾರ ಬೆಳಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ರೌಂಡ್ಸ್ಗೆ ಹೋದಾಗ ಉಸಿರಾಟ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
1999ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದ ಶಿವಶಂಕರ್ ಚಾರಿ ಕಳೆದ ಒಂದೂವರೆ ವರ್ಷದಿಂದ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರ ಸಾವಿಗೆ ಕುಟುಂಬ ಸದಸ್ಯರು, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಪೊಲೀಸ್ ವಶದಲ್ಲಿರುವ ಆರೋಪಿಗಳ ಆಹಾರ ಭತ್ಯೆ ₹75 ರಿಂದ ₹150ಕ್ಕೆ ಏರಿಸಿದ ಸರ್ಕಾರ