ETV Bharat / snippets

ಪ್ಲೈಓವರ್ ಕಾಮಗಾರಿ ವೇಳೆ ತಲೆಗೆ ಕಬ್ಬಿಣದ ರಾಡ್ ಬಿದ್ದು ASIಗೆ ಗಂಭೀರ ಗಾಯ

ಹುಬ್ಬಳ್ಳಿ ಉಪನಗರ ಪೊಲೀಸ್​ ಠಾಣೆ
ಹುಬ್ಬಳ್ಳಿ ಉಪನಗರ ಪೊಲೀಸ್​ ಠಾಣೆ (ETV Bharat)
author img

By ETV Bharat Karnataka Team

Published : Sep 11, 2024, 9:16 AM IST

ಹುಬ್ಬಳ್ಳಿ: ಪ್ಲೈಓವರ್ ಕಾಮಗಾರಿ ಸಂದರ್ಭದಲ್ಲಿ ಪ್ಲೈಓವರ್ ಮೇಲಿಂದ ಕಬ್ಬಿಣದ ರಾಡ್ ತಲೆಗೆ ಬಿದ್ದು ಅಸಿಸ್ಟೆಂಟ್ ಸಬ್‌ ಇನ್ಸ್‌ಪೆಕ್ಟರ್ (ಎಎಸ್ಐ) ಗಾಯಗೊಂಡ ಘಟನೆ ನಗರದ ಹಳೆ ಕೋರ್ಟ್ ಸರ್ಕಲ್ ಬಳಿ ಮಂಗಳವಾರ ನಡೆಯಿತು.

ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್ಐ ನಬಿರಾಜ್ ದಾಯಣ್ಣವರ ಅವರಿಗೆ ಗಂಭೀರ ಗಾಯಗಳಾಗಿದ್ದು, ವಿವೇಕಾನಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಹೆಚ್ಚು ಸುದ್ದಿಯಲ್ಲಿರುವ ಫ್ಲೈ ಓವರ್ ಕಾಮಗಾರಿಗಳು ಇದೀಗ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಕಂಟಕವಾಗುತ್ತಿದೆ. ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಕಾಮಗಾರಿ ಮಾಡುತ್ತಿರುವುದೇ ಇಂಥ ಅವಘಡಗಳಿಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಯಚೂರು: ತರಗತಿಯಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.