ತುಮಕೂರು: ಕಾಮಗಾರಿಯ ಬಿಲ್ ಪಾಸ್ ಮಾಡಲು ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ಜಿಲ್ಲಾ ಪಂಚಾಯಿತಿ ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಎಇಇಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಮಾಪತಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದವರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇಯಾಗಿರುವ ಉಮಾಪತಿ, ಜೆಜೆಎಂ (ಜಲ್ ಜೀವನ್ ಮಿಷನ್) ಬಿಲ್ ಪಾಸ್ ಮಾಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗುತ್ತಿಗೆದಾರ ಚಿಕ್ಕೇಗೌಡ ಎಂಬುವರಿಗೆ ಒಂದೂವರೆ ಲಕ್ಷ ರೂ. ನೀಡುವಂತೆ ಕೇಳಿದ್ದಾರೆ ಎಂದು ಗುತ್ತಿಗೆದಾರರು ಲೋಕಾಯುಕ್ತರಿಗೆ ದೂರು ನೀಡಿದ್ದರು.
ಬಳಿಕ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಉಮಾಶಂಕರ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಇದನ್ನೂ ಓದಿ: ಚೆಕ್ ಬೌನ್ಸ್ ಪ್ರಕರಣ: ನಟಿ ಪದ್ಮಜಾ ರಾವ್‌ಗೆ ದಂಡ ವಿಧಿಸಿದ ಕೋರ್ಟ್ - Padmaja Rao Check Bounce Case