ETV Bharat / snippets

ಹಾವೇರಿ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹ 8 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶಕ್ಕೆ

author img

By ETV Bharat Karnataka Team

Published : May 25, 2024, 7:05 AM IST

Ration rice seized  Haveri  Food Department  Bankapur Police
ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಚೀಲಗಳನ್ನು ಬಂಕಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. (ETV Bharat)

ಹಾವೇರಿ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಚೀಲಗಳನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಬಂಕಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅನುಮಾನಾಸ್ಪದವಾಗಿ ಸಾಗಿಸುತ್ತಿದ್ದ 478 ಅಕ್ಕಿಚೀಲಗಳನ್ನ ಹಾವೇರಿ ಜಿಲ್ಲೆಯ ಬಂಕಾಪುರ ಟೋಲ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

478 ಚೀಲಗಳಲ್ಲಿ ಪಡಿತರ ಅಕ್ಕಿ ತುಂಬಿದ್ದು, ಸುಮಾರು ₹8,11,580 ಮೌಲ್ಯದ ಪಡಿತರ ಅಕ್ಕಿ ತೆಗೆದುಕೊಂಡು ಬೆಂಗಳೂರು ಕಡೆ ಲಾರಿ ಹೊರಟಿತ್ತು. ಶಿಗ್ಗಾಂವಿಯ ಆಹಾರ ನಿರೀಕ್ಷಕರು ಮತ್ತು ಬಂಕಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಲಾರಿ ಮತ್ತು ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ‌. ಅಕ್ಕಿಚೀಲ ಸಾಗಿಸುತ್ತಿದ್ದ ₹10 ಲಕ್ಷ ಮೌಲ್ಯದ ಲಾರಿಯನ್ನು ಸಹ ವಶಕ್ಕೆ ಪಡೆಯಲಾಗಿದೆ. ಪಿಎಸ್ಐ ಕೃಷ್ಣಪ್ಪ ತೋಪಿನ್ ನೇತೃತ್ಚದಲ್ಕಿ ನಡೆದ ದಾಳಿಯಲ್ಲಿ ಪಡಿತರ ಅಕ್ಕಿ ಮತ್ತು ಲಾರಿ ವಶಪಡಿಸಿಕೊಳ್ಳಲಾಗಿದೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ: ಅರಣ್ಯಾಧಿಕಾರಿಗಳಿಂದ ಕಾಡುಪ್ರಾಣಿ ಬೇಟೆಗಾರರ ಬೇಟೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.