ETV Bharat / snippets

ಒಟಿಎಸ್ ಯೋಜನೆ ನಿಮಿತ್ತ 4ನೇ ಶನಿವಾರವೂ ಪಾಲಿಕೆ ಕಂದಾಯ ಕಚೇರಿಗಳು ಓಪನ್

author img

By ETV Bharat Karnataka Team

Published : Jul 26, 2024, 10:49 PM IST

BBMP
ಬಿಬಿಎಂಪಿ (ETV Bharat)

ಬೆಂಗಳೂರು : ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ ಯೋಜನೆ ಜುಲೈ 31ರಂದು ಕೊನೆಗೊಳ್ಳಲಿದ್ದು, ಈ ಸಂಬಂಧ ನಾಳೆ 4ನೇ ಶನಿವಾರವೂ ಕಂದಾಯ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದು ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

4ನೇ ಶನಿವಾರ ಸಾರ್ವಜನಿಕ ರಜಾ ದಿನವಾಗಿದ್ದು, ವಲಯ ಜಂಟಿ ಆಯುಕ್ತರ ಕಚೇರಿಗಳು ಸ್ಥಾಪಿಸಿರುವ ಹೆಲ್ಪ್ ಡೆಸ್ಕ್‌ಗಳು, ಹಾಗೂ ಎಲ್ಲಾ ಸಹಾಯಕ ಕಂದಾಯ ಅಧಿಕಾರಿ ಕಚೇರಿಗಳಲ್ಲಿನ ಹೆಲ್ಪ್ ಡೆಸ್ಕ್​ಗಳು ಕಾರ್ಯನಿರ್ವಹಿಸಲಿವೆ ಎಂದಿದೆ.

ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಬಾಕಿ ಆಸ್ತಿ ತೆರಿಗೆ ಪಾವತಿದಾರರು ಹಾಗೂ ಶೈಕ್ಷಣಿಕ ಸಂಸ್ಥೆಗಳು ಒಂದು ಬಾರಿ ಪರಿಹಾರ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕಂದಾಯ ವಿಭಾಗದ ಜಂಟಿ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ : ಒಟಿಎಸ್ ಮೂಲಕ ಬಾಕಿ ಆಸ್ತಿ ತೆರಿಗೆ ತ್ವರಿತವಾಗಿ ಪಾವತಿಸಿ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಮನವಿ - Property Tax Arrears

ETV Bharat Logo

Copyright © 2024 Ushodaya Enterprises Pvt. Ltd., All Rights Reserved.