ETV Bharat / snippets

ಬೆಳಗಾವಿ-ಮೀರಜ್ ವಿಶೇಷ ಪ್ಯಾಸೆಂಜರ್ ರೈಲು ಸೇವೆ ಆರಂಭ

SPECIAL TRAIN
ಸಂಗ್ರಹ ಚಿತ್ರ (ETV Bharat)
author img

By ETV Bharat Karnataka Team

Published : Jul 31, 2024, 7:29 AM IST

ಬೆಳಗಾವಿ: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಗಳಿಗೆ ತೀವ್ರ ಹಾನಿಯಾಗಿದ್ದು, ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ದೈನಂದಿನ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಓಡಿಸಲಾಗುತ್ತಿದೆ.

ಬೆಳಗಾವಿ-ಮೀರಜ್ ರೈಲು‌: ಪ್ರತಿದಿನ ಬೆಳಿಗ್ಗೆ 6.10ಕ್ಕೆ ಹೊರಟು 9.10ಕ್ಕೆ ಮೀರಜ್ ತಲುಪಲಿದೆ. ಮರಳಿ ಬೆಳಿಗ್ಗೆ 9.50ಕ್ಕೆ ಮೀರಜ್​ನಿಂದ ಹೊರಟು ಮಧ್ಯಾಹ್ನ 12.50ಕ್ಕೆ ಬೆಳಗಾವಿ ತಲುಪುತ್ತದೆ.

ಬೆಳಗಾವಿ-ಮೀರಜ್ ರೈಲು: ಮಧ್ಯಾಹ್ನ 1.30ರಿಂದ ಬೆಳಗಾವಿಯಿಂದ ಹೊರಟು ಸಂಜೆ 04.30ಕ್ಕೆ ಮೀರಜ್ ತಲುಪಲಿದೆ. ಮರಳಿ ಸಂಜೆ 05.35ಕ್ಕೆ ಮೀರಜ್​ನಿಂದ ಹೊರಟು ರಾತ್ರಿ 08.35ಕ್ಕೆ ಬೆಳಗಾವಿ ತಲುಪುತ್ತದೆ.

ಜುಲೈ 31ರಿಂದ ಆಗಸ್ಟ್ 4ರವರೆಗೆ ಬೆಳಗಾವಿ-ಮೀರಜ್ ರೈಲು ದಿನಕ್ಕೆ 2 ಬಾರಿ ಓಡಾಟ ನಡೆಸಲಿದೆ. ಪ್ರಯಾಣಿಕರು ವಿಶೇಷ ರೈಲಿನ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.