ಬೆಳಗಾವಿ: ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿಯೊಬ್ಬ ಕಾಲೇಜಿನ ಹಾಸ್ಟೆಲ್ನಲ್ಲಿ ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ವಿದ್ಯಾರ್ಥಿಯನ್ನು ಹುಕ್ಕೇರಿ ತಾಲೂಕಿನ ನಿಡಸೋಸಿ ಗ್ರಾಮದ ಪಿಯು ಕಾಲೇಜಿನ ಹಾಸ್ಟೆಲ್ನಲ್ಲಿ ಮಯೂರ ಕುಂಬಾರ (17) ಎಂದು ಗುರುತಿಸಲಾಗಿದೆ.
ಮಹಾರಾಷ್ಟ್ರದ ಸಾಂಗಲಿ ಮೂಲದ ಮಯೂರ ಪ್ರಥಮ ಪಿಯುಸಿ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಸಂಜೆ ಹಾಸ್ಟೆಲ್ ರೂಮಿನಲ್ಲಿ ಯಾರೂ ಇಲ್ಲದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಬಾಲಕನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗೆಳೆಯರು ಹೊರಗಡೆ ಜನ್ಮದಿನದ ಆಚರಣೆಗೆ ಸಿದ್ಧತೆ ನಡೆಸಿದರು ಎನ್ನಲಾಗಿದೆ. ಸ್ಥಳಕ್ಕೆ ಸಂಕೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಓದಿ: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ ದಂಧೆ: ರೆಡ್ಹ್ಯಾಂಡ್ ಆಗಿ ಆರೋಪಿಗಳು ಸೆರೆ - Female Foeticide Racket