ಧಾರವಾಡ: ಹುಬ್ಬಳ್ಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ತನಿಖೆಗೆ ಸಿಬಿಐ ತನಿಖಾಧಿಕಾರಿಗಳ ತಂಡ ಧಾರವಾಡಕ್ಕೆ ಆಗಮಿಸಿದೆ. ಈಗಾಗಲೇ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಹ ಸಲ್ಲಿಸಿದ್ದಾರೆ.
ಧಾರವಾಡದ ಸಪ್ತಾಪೂರದ ಜಿಮ್ನಲ್ಲಿ ಯೋಗೀಶ್ ಗೌಡ ಕೊಲೆಯಾಗಿತ್ತು. ಇಂದು ಆ ಸ್ಥಳಕ್ಕೆ ತನಿಖಾಧಿಕಾರಿ ರಾಕೇಶ್ ರಂಜನ್ ನೇತೃತ್ವದ ತಂಡ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶೆಟ್ಟಿ ಅವರಿಗೆ ಸಿಬಿಐ ಅಧಿಕಾರಿ ರಾಕೇಶ ರಂಜನ್ ಪ್ರಕರಣದ ಮಾಹಿತಿ ನೀಡಿದರು.
ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಪ್ರಮುಖ ಆರೋಪಿ. ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೀಗ ಸಾಕ್ಷಿಗಳಿಗೆ ಸಮನ್ಸ್ ನೀಡಲು ಸಿಬಿಐ ತಂಡ ಆಗಮಿಸಿದೆ.
ಇದನ್ನೂ ಓದಿ: ಬೆಂಗಳೂರು: ಕುಟುಂಬದ ಜೊತೆ ತೆರಳುತ್ತಿದ್ದವರ ಮೇಲೆ ಯುವಕರ ರ್ಯಾಗಿಂಗ್! - Ragging