ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಯುಜಿಸಿಇಟಿ ಮತ್ತು ಯುಜಿನೀಟ್ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಪ್ರವೇಶ ಪ್ರಕ್ರಿಯೆ ಮುಗಿಸಿಕೊಳ್ಳಲು ದಿನಾಂಕಗಳನ್ನು ವಿಸ್ತರಿಸಲಾಗಿದೆ.
ಸಿಇಟಿ ಸೀಟು ಪಡೆದವರು ಚಾಯ್ಸ್ ದಾಖಲಿಗೆ ಸೆ.26ರ ವರೆಗೆ, ಶುಲ್ಕ ಪಾವತಿ ಮತ್ತು ದಾಖಲೆ ಸಲ್ಲಿಸಲು ಸೆ.27ರ ವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.28ರ ವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ಗಳಿಗೆ ಚಾಯ್ಸ್ ದಾಖಲಿಸಲು ಅವಕಾಶ ಇಲ್ಲ. ಆದರೆ, ಶುಲ್ಕ ಪಾವತಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಇದೇ ದಿನಾಂಕಗಳು ಅನ್ವಯವಾಗಲಿವೆ ಎಂದು ಅವರು ವಿವರಿಸಿದರು.
ಇದನ್ನೂ ಓದಿ: ಯುಜಿ ಸಿಇಟಿ-ನೀಟ್: ಎಂಜಿನಿಯರಿಂಗ್ ಸೆ.23, ವೈದ್ಯಕೀಯ ಸೆ.24ರಿಂದ ಪ್ರವೇಶ ಆರಂಭ - UG CET NEET Seat Allotment