ಚಿಕ್ಕಬಳ್ಳಾಪುರ: ಪೋಕ್ಸೋ ಪ್ರಕರಣ ಸಂಬಂಧ ಅಪರಾಧಿಯೊಬ್ಬನಿಗೆ ಸ್ಥಳೀಯ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಎಸ್ಟಿಎಸ್ಸಿ 1ನೇ ನ್ಯಾಯಾಲಯದ ನ್ಯಾಯಾಧೀಶರಾದ ಸವಿತಾ ಕುಮಾರಿ.ಎನ್. ಅವರು ಈ ಆದೇಶ ಹೊರಡಿಸಿದ್ದಾರೆ. ಶಿಡ್ಲಘಟ್ಟ ತಾಲೂಕಿನ ಗ್ರಾಮವೊಂದರ ಪಟೇಲ್ ಶಿಕ್ಷೆಗೊಳಗಾದ ವ್ಯಕ್ತಿ.
4 ವರ್ಷಗಳ ಹಿಂದೆ ಅಪ್ರಾಪ್ತೆಯನ್ನು ಬೈಕ್ನಲ್ಲಿ ಕರೆದುಕೊಂಡು ಹೋಗಿ ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ್ದ ಎಂದು ಆರೋಪಿ ಪಟೇಲ್ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಠಾಣೆಯ ಸಿಪಿಐ ಸುರೇಶ್.ಕೆ, ಈತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಇಂದು ತೀರ್ಪು ನೀಡಿದ ಎಸ್ಟಿಎಸ್ಸಿ 1ನೇ ನ್ಯಾಯಾಲಯವು ತಪ್ಪಿತಸ್ಥನಿಗೆ 20 ವರ್ಷಗಳ ಕಠಿಣ ಶಿಕ್ಷೆ, ಐದು ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.