ETV Bharat / snippets

ಫಾಕ್ಸ್ಕಾನ್ ಅಧ್ಯಕ್ಷರ ಜೊತೆ ಸಿಎಂ ಭೋಜನಕೂಟ; ಕಂಪೆನಿಗೆ ಎಲ್ಲಾ ನೆರವಿನ ಭರವಸೆ

OXCONN CHIEF MEETS KARNATAKA CM
ಫಾಕ್ಸ್ಕಾನ್ ಸಂಸ್ಥೆಯ ಅಧ್ಯಕ್ಷ ಯಂಗ್ ಲಿಯು ಜೊತೆ ಸಿಎಂ ಮತ್ತು ಸಚಿವರು (ETV Bharat)
author img

By ETV Bharat Karnataka Team

Published : Aug 16, 2024, 9:33 PM IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೈವಾನ್ ಮೂಲದ ಆ್ಯಪಲ್ ಫೋನ್ ಕಂಪೆನಿ ಫಾಕ್ಸ್ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಅವರೊಂದಿಗೆ ಇಂದು ಚರ್ಚೆ ನಡೆಸಿದರು.

ಖಾಸಗಿ ಹೋಟೆಲ್​ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಕಂಪೆನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಸಹಕಾರ, ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೇರಿದಂತೆ ಕೈಗಾರಿಕೆ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.