ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕಾಗಿ ಹಾವೇರಿಯಲ್ಲಿ ರೈತರು ಸಾಲುಗಟ್ಟಿ ನಿಂತಿದ್ದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಚೆಲುವರಾಯಸ್ವಾಮಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆ ಶುರು ಮಾಡಿದ್ದಾರೆ. ರೈತರು ಬೀಜ, ಗೊಬ್ಬರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ತಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಬೀಜ, ಗೊಬ್ಬರದ ದಾಸ್ತಾನು ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಬಹು ಬೆಳೆ ಬೇಸಾಯದಿಂದ ಹಾವೇರಿ ರೈತನಿಗೆ ಲಕ್ಷ ಲಕ್ಷ ಆದಾಯ - Multi Cropping