ETV Bharat / snippets

ಸ್ವಾತಂತ್ರ್ಯ ದಿನಾಚರಣೆ: ಹೋಟೆಲ್​ಗಳಲ್ಲಿ ತಂಗುವವರ ಮೇಲೆ ನಿಗಾ ವಹಿಸುವಂತೆ ಕಮಿಷನರ್​ ಸೂಚನೆ

author img

By ETV Bharat Karnataka Team

Published : Aug 9, 2024, 7:30 AM IST

independence day
ನಗರ ಪೊಲೀಸ್ ಆಯುಕ್ತ ಬಿ.ದಯಾನಂದ (ETV Bharat)

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ನಗರದ ವಸತಿ ಸೌಕರ್ಯವುಳ್ಳ ಹೋಟೆಲ್​ಗಳಲ್ಲಿ ಉಳಿದುಕೊಳ್ಳುವ ಪ್ರವಾಸಿಗರ ಬಗ್ಗೆ ಮಾಹಿತಿ ನೀಡುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ನಗರದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಆಗಸ್ಟ್​ 15ರಂದು ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕವಾಯತು ಮತ್ತು ಸಮಾರಂಭಗಳು ನಡೆಯಲಿವೆ. ಉಗ್ರಗಾಮಿಗಳು ಬೆಂಗಳೂರು ನಗರವನ್ನು ಗುರಿಯಾಗಿಸಿರುವುದರಿಂದ ಹೋಟೆಲ್​ಗಳಲ್ಲಿ ತಂಗುವ ವಿದೇಶಿಯರು, ಸಂಶಯಾಸ್ಪದ ವ್ಯಕ್ತಿಗಳು ಹಾಗೂ ಅಪರಿಚಿತ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಕಮಿಷನರ್ ತಿಳಿಸಿದ್ದಾರೆ.

ಇಂತಹ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಲು ತಮ್ಮ ಸಂಘದ ಸದಸ್ಯರಾಗಿರುವ ಹೋಟೆಲ್ ಮಾಲೀಕರು, ಹೋಟೆಲ್ ಮ್ಯಾನೇಜರ್​ಗಳು ಹಾಗೂ ಇತರ ನೌಕರರಿಗೆ ತಿಳಿಸಬೇಕು. ಒಂದು ವೇಳೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು. ವಸತಿ ಗೃಹಗಳಲ್ಲಿ ತಂಗುವವರ ವಿವರಗಳು, ಫೋಟೋ, ಗುರುತಿನ ಚೀಟಿ ಸಮೇತ ದಾಖಲೆ ನಿರ್ವಹಿಸಬೇಕು. ಭದ್ರತಾ ಕಾರ್ಯದಲ್ಲಿ ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುವಂತೆ ಪೊಲೀಸ್ ಆಯುಕ್ತ ಬಿ.ದಯಾನಂದ ತಮ್ಮ ಪತ್ರದಲ್ಲಿ ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.