ETV Bharat / snippets

ಮದುವೆಯಾಗುವುದಾಗಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

minor rape
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Sep 21, 2024, 9:49 PM IST

ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಶನಿವಾರ ತೀರ್ಪು ಪ್ರಕಟಿಸಿದೆ. ಶಿಕ್ಷೆಗೆ ಒಳಗಾದ ವ್ಯಕ್ತಿಯು ಮಹಾರಾಷ್ಟ್ರದ ಮೀರಜ್‌ ಮೂಲದವನಾಗಿದ್ದಾನೆ.

ಮದುವೆ ಆಗುವುದಾಗಿ ನಂಬಿಸಿ ಬಾಲಕಿಯನ್ನು 2016ರ ಅ.24ರಂದು ಆರೋಪಿ ಕರೆದುಕೊಂಡು ಹೋಗಿದ್ದ. ಕೊಲ್ಹಾಪುರ ಜಿಲ್ಲೆಯ ಕರವೀರ ತಾಲೂಕಿನ ಮನೆಯೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ವಿಚಾರ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ. ಈ ಸಂಬಂಧ ಬಾಲಕಿಯ ತಂದೆ ರಾಯಬಾಗದ ಕುಡಚಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ತನಿಖಾಧಿಕಾರಿ ಬಿ.ಎಸ್‌.ಲೋಕಾಪುರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ.ಪುಷ್ಪಲತಾ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿದ್ದಾರೆ. ಅಲ್ಲದೇ, ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಎಲ್‌.ವಿ.ಪಾಟೀಲ ವಾದ‌ ಮಂಡಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.