ETV Bharat / snippets

ಕತ್ತು ಕೊಯ್ದು ಪತ್ನಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ

court
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Oct 20, 2024, 9:41 AM IST

ಕಾರವಾರ(ಉತ್ತರ ಕನ್ನಡ): ಸಂಶಯದ ಮೇಲೆ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ್ದ ಅಪರಾಧಿ ಪತಿಗೆ ಶಿರಸಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ.

ಹಳಿಯಾಳದ ಯಡೋಗಾ ಗ್ರಾಮದ ರಾಜಕುಮಾರ್ ಕುಂದೇಕರ್ ಶಿಕ್ಷೆಗೊಳಗಾದವ. ಪತ್ನಿ ಅರ್ಪಣಾಗೆ ಬೇರೆ ಗಂಡಸರೊಂದಿಗೆ ಮಾತನಾಡದಂತೆ ಎಚ್ಚರಿಕೆ ನೀಡಿದ್ದ. ಆದರೂ ಆಕೆ ಬೇರೆಯವರೊಂದಿಗೆ ಮಾತನಾಡುತ್ತಿದ್ದಾಳೆಂದು ಕೋಪಗೊಂಡು 2022ರ ಫೆ.10ರಂದು ಕತ್ತು ಕೊಯ್ದು ಕೊಲೆ ಮಾಡಿದ್ದ. ಈ ಬಗ್ಗೆ ಹಳಿಯಾಳ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಸಿಪಿಐ ರಂಗನಾಥ ನೀಲಮ್ಮನವರ ತನಿಖೆ ಕೈಗೊಂಡು, ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕಿರಣ್ ಕಿಣಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಮೃತಳ ಮಕ್ಕಳಿಗೆ ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ರಾಜೇಶ್ ಎಂ.ಮಳಗೀಕರ್ ವಾದ ಮಂಡಿಸಿದ್ದರು.

ಇದನ್ನೂ ಓದಿ: ಹರಾಜಿನಲ್ಲಿ ಖರೀದಿಸಿದ ಆಸ್ತಿಗೆ ಬಾಕಿ ಮೊತ್ತ ಪಾವತಿಸದಿದ್ದಲ್ಲಿ ಠೇವಣಿ ಮುಟ್ಟುಗೋಲು ಹಾಕಿಕೊಳ್ಳಬಹುದು; ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.