ETV Bharat / snippets

ಸಂಸದ ಶ್ರೀನಿವಾಸ ಪೂಜಾರಿ ಹೆಸರಲ್ಲಿ ನಕಲಿ ತೆರೆದು ಹಣಕ್ಕೆ ಬೇಡಿಕೆಯಿಟ್ಟ ಕಿಡಿಗೇಡಿಗಳು

author img

By ETV Bharat Karnataka Team

Published : 3 hours ago

srinivas poojary
ಸಂಸದ ಕೋಟ ಶ್ರೀನಿವಾಸ ಪೂಜಾರಿ (ETV Bharat)

ಉಡುಪಿ: ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು, ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸದ ಪೂಜಾರಿ ಅವರ ಫೋಟೋವನ್ನು ದುರುಪಯೋಗಪಡಿಸಿಕೊಂಡು, ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್​ನಲ್ಲಿ ನಕಲಿ ಖಾತೆ ತೆರೆಯಲಾಗಿದೆ. ಅದರ ಮೂಲಕ ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂದು ದೂರಲಾಗಿದೆ.

ದುರುದ್ದೇಶಪೂರ್ವಕವಾಗಿ ಅಕ್ರಮ ಹಣ ಸಂಪಾದಿಸುವ ಹಾಗೂ ಹೆಸರು ಕೆಡಿಸುವ ಉದ್ದೇಶದಿಂದ ನಕಲಿ ಖಾತೆ ಸೃಷ್ಟಿಸಲಾಗಿದೆ. ಸಂಸದರ ಹೆಸರಿನಲ್ಲಿ ನಕಲಿ ಖಾತೆ ತೆರೆದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಕೀಲ ಶ್ಯಾಮಸುಂದರ ನಾಯರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ. ಸೆನ್ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಹಿಂಡಲಗಾ ಜೈಲಿನಲ್ಲಿ ಮಾರಾಮಾರಿ: ವಿಚಾರಣಾ ಕೈದಿಗೆ ಗಂಭೀರ ಗಾಯ - Hindalaga Jail Prisoners Fight

ETV Bharat Logo

Copyright © 2024 Ushodaya Enterprises Pvt. Ltd., All Rights Reserved.