ETV Bharat / snippets

ವಾರಾಹಿ ನದಿ ಪಾತ್ರದಲ್ಲಿ ಪ್ರವಾಹದ ಮುನ್ನೆಚ್ಚರಿಕೆ: ಜನ, ಜಾನುವಾರು ಸ್ಥಳಾಂತರಕ್ಕೆ ಸೂಚನೆ

varahi river
ವಾರಾಹಿ ನದಿ (ETV Bharat)
author img

By ETV Bharat Karnataka Team

Published : Aug 5, 2024, 8:01 PM IST

ಉಡುಪಿ: ವಾರಾಹಿ ಯೋಜನೆಯ ಮಾನಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಆದ್ದರಿಂದ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವಾರಾಹಿ/ಹಾಲಾಡಿ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಅಭಿಯಂತರರು ಸೂಚನೆ ನೀಡಿದ್ದಾರೆ.

ಸತತವಾಗಿ ಬೀಳುತ್ತಿರುವ ಮಳೆಯಿಂದ ಜಲಾಶಯದ ನೀರಿನ ಮಟ್ಟವು ಏಕಪ್ರಕಾರವಾಗಿ ಏರುತ್ತಿದೆ. ಮಾನಿ ಜಲಾಶಯದ ಗರಿಷ್ಟ ಮಟ್ಟವು 594.36 ಮೀಟರ್ ಇದೆ. ಆ.5ರಂದು ಬೆಳಗ್ಗೆ 8 ಗಂಟೆಗೆ ಜಲಾಶಯದ ನೀರಿನ ಮಟ್ಟವು 588.15 (ಶೇ.65.17) ಮೀಟರ್‌ ತಲುಪಿದೆ. ಒಳಹರಿವು ಸುಮಾರು 3,393 ಕ್ಯೂಸೆಕ್​ ಇದೆ ಎಂದು ತಿಳಿಸಿದ್ದಾರೆ.

ಇದೇ ರೀತಿ ಜಲಾಶಯಕ್ಕೆ ಒಳಹರಿವು ಮುಂದುವರೆದಲ್ಲಿ ಜಲಾಶಯವು ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇದೆ. ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ಹೆಚ್ಚಾದ ನೀರನ್ನು ಹೊರಬಿಡಲಾಗುವುದು ಎಂದು ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.