ETV Bharat / snippets

ರಾಯಚೂರು: ಬೀದಿ ನಾಯಿ ಕಡಿತಕ್ಕೆ ಒಳಗಾಗಿದ್ದ ಬಾಲಕಿ ಸಾವು

author img

By ETV Bharat Karnataka Team

Published : May 21, 2024, 3:47 PM IST

Stray Dogs
ಬೀದಿ ನಾಯಿಗಳು (ಸಂಗ್ರಹ ಚಿತ್ರ)

ರಾಯಚೂರು: ಬೀದಿ ನಾಯಿ ಕಡಿತಕ್ಕೆ ಒಳಗಾಗಿದ್ದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ನಿವಾಸಿ ಕೀರಲಿಂಗ ಎಂಬುವರ ಪುತ್ರಿ ಲಾವಣ್ಯ (4) ಎಂಬ ಬಾಲಕಿಯೇ ಮೃತಳು.

ಗ್ರಾಮದಲ್ಲಿ ಕಳೆದ 15 ದಿನಗಳ ಹಿಂದೆ ಮೂರ್ನಾಲ್ಕು ಮಕ್ಕಳ ಮೇಲೆ ಬೀದಿ ನಾಯಿ ದಾಳಿ ಮಾಡಿತ್ತು. ಈ ಮನೆ ಬಳಿ ಆಟವಾಡುತ್ತಿದ್ದ ಲಾವಣ್ಯ ಕೂಡ ಗಾಯಗೊಂಡಿದ್ದಳು. ಹೀಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಡಿಸ್ಚಾರ್ಜ್ ಆಗಿದ್ದ ಬಾಲಕಿಗೆ ಮನೆಯಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಆದರೆ, ಶನಿವಾರದಂದು ಕೊನೆಯುಸಿರೆಳೆದಿದ್ಧಾಳೆ.

ಇದೀಗ ಬಾಲಕಿ ಸಾವಿನ ಬಳಿಕ ಇತರ ಮಕ್ಕಳ ಪೋಷಕರಲ್ಲೂ ಆತಂಕಕ್ಕೆ ಕಾರಣವಾಗಿದೆ. ಬೀದಿ ನಾಯಿಗಳ ಹಾವಳಿ ತಡೆಗೆ ಸಂಬಂಧಪಟ್ಟ ಸಗಮಕುಂಟಾ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ. ನಾಯಿ ಕಡಿತಕ್ಕೆ ಒಳಗಾದ ಮಕ್ಕಳ ಕುಟುಂಬಸ್ಥರಿಗೆ ಸಾಂತ್ವನ ಕೂಡ ಹೇಳಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಇದನ್ನೂ ಓದಿ: ಹೆಚ್ಚುತ್ತಿರುವ ನಾಯಿ ದಾಳಿ ಪ್ರಕರಣಗಳು: ರಕ್ಷಣೆಗೆ ವಹಿಸಿ ಈ ಎಲ್ಲ ಮುನ್ನೆಚ್ಚರಿಕೆ ಕ್ರಮಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.