ETV Bharat / snippets

ಅಕ್ಟೋಬರ್​ನಿಂದ ಸರ್ಕಾರಿ ನೌಕರರ ಸಂಘದ ಚುನಾವಣೆ: ಸಿ.ಎಸ್.ಷಡಾಕ್ಷರಿ

author img

By ETV Bharat Karnataka Team

Published : Aug 29, 2024, 7:15 AM IST

C S SHADAKSHARI
ಸಿ.ಎಸ್.ಷಡಾಕ್ಷರಿ (ETV Bharat)

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯನ್ನು ಅಕ್ಟೋಬ‌ರ್ ಕೊನೆಯ ವಾರದಿಂದ ನಡೆಸಲು ರಾಜ್ಯ ಕಾರ್ಯಕಾರಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧಿಕಾರವಧಿ ಆಗಸ್ಟ್​ 8ಕ್ಕೆ ಮುಕ್ತಾಯವಾಗಿದೆ. ಸೆಪ್ಟೆಂಬರ್‌ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ದಸರಾ ರಜೆ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ತೊಂದರೆ ಆಗಬಹುದು ಎಂಬ ಕಾರಣಕ್ಕೆ ಚುನಾವಣಾ ಸಮಯ ಬದಲಾವಣೆ ಮಾಡಲಾಗಿದೆ. ಹಾಗಾಗಿ ಅಕ್ಟೋಬರ್​​ನಿಂದ ಚುನಾವಣೆಗಳು ನಡೆಯಲಿವೆ ಎಂದಿದ್ದಾರೆ.

ಅಕ್ಟೋಬರ್‌ ಕೊನೆಗೆ ಮೊದಲ ಹಂತದಲ್ಲಿ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಸಲಾಗುತ್ತದೆ. ಬಳಿಕ ನವೆಂಬರ್‌ನಲ್ಲಿ ತಾಲೂಕು ಹಾಗೂ ಜಿಲ್ಲಾ ಘಟಕಕ್ಕೆ ಚುನಾವಣೆ ನಡೆಸಿ, ಕಡೆಯದಾಗಿ ರಾಜ್ಯ ಘಟಕದ ಚುನಾವಣೆಗೆ ನಿರ್ಧರಿಸಲಾಗಿದೆ. ಸದ್ಯದಲ್ಲೇ ಈ ಸಂಬಂಧ ಅಧಿಸೂಚನೆ ಪ್ರಕಟಿಸಲಾಗುತ್ತದೆ ಎಂದು ಷಡಾಕ್ಷರಿ ತಿಳಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಹೆಸರುಕಾಳು ದರ ಏರಿಕೆ, ರೈತರ ಮೊಗದಲ್ಲಿ ಮೂಡಿದ ಮಂದಹಾಸ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.